ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ. ಆದರೆ ವಿಚಿತ್ರ ಎಂದರೆ ಈ ಬಾಂಬ್ ಬೆದರಿಕೆ ಮೇಲ್ ಬಂದಿರುವುದು ನಟ, ನಿರ್ದೇಶಕ ಹುಚ್ಚ ವೆಂಕಟ್ ಹೆಸರಲ್ಲಿ.  Huchaswamyvenkat96@gmail.com ಅನ್ನೋ ಮೇಲ್ ಐಡಿಯಿಂದ  ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಬೆದರಿಕೆ ಪತ್ರ ಬಂದಿದೆ. ಈ ಪ್ರಕರಣ ಪೊಲೀಸರಲ್ಲೂ  ಗೊಂದಲ ಮೂಡಿಸಿದೆ. 


COMMERCIAL BREAK
SCROLL TO CONTINUE READING

ನಿನ್ನೆ ಸಂಜೆ 6:28 ರ ಸುಮಾರಿಗೆ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಕ್ಯಾಂಪಸ್ ಹಾಗೂ ಶಾಲೆಯಲ್ಲಿ ಬಾಂಬ್ ಇಡಲಾಗಿದ್ದು, ಬೆಳಗ್ಗೆ 10 ಗಂಟೆಗೆ ಬ್ಲಾಸ್ಟ್ ಆಗುವ ಹಾಗೆ ಫಿಕ್ಸ್ ಮಾಡಲಾಗಿದೆ ಎಂದು ಬೆದರಿಕೆ ಪತ್ರದಲ್ಲಿ ತಿಳಿಸಲಾಗಿತ್ತು. 


ಇದನ್ನೂ ಓದಿ : ‘ಜೈ ಭೀಮ್ʼ ಮತ್ತು ‘ಜನ ಗಣ ಮನ’ ಸಿನಿಮಾಗಳು ನನ್ನ ಮನ ಕಲಕಿವೆ: ಎಚ್‌ಡಿಕೆ


ಶಾಲೆ ಆವರಣದಿಂದ 200 ಮೀಟರ್ ದೂರದವರೆಗೆಈ ಬಾಂಬ್ ಬ್ಲಾಸ್ಟ್ ನ ಎಫೆಕ್ಟ್ ಇರಲಿದೆ ಎಂದು ನಟ ಹುಚ್ಚ ವೆಂಕಟ್ ಹೆಸರಲ್ಲಿ ಮೇಲ್ ಮಾಡಲಾಗಿದೆ. ಬೆದರಿಕೆ ಪತ್ರದಲ್ಲಿ ಕೊನೆಗೆ  ಥ್ಯಾಂಕ್ಸ್ ಎಂದು  ಮತ್ತು ರಿಗಾರ್ಟ್ಸ್ ನಲ್ಲಿ ಬಾಂಬ್ ಟೆರರಿಸ್ಟ್  ಎಂದು ಬರೆಯಲಾಗಿದೆ. 


ಹುಚ್ಚ  ವೆಂಕಟ್ ಹೆಸರಲ್ಲಿ ಬಂದಿದ್ದ ಬೆದರಿಕೆ ಪತ್ರವನ್ನು ಇಂದು ಬೆಳಗ್ಗೆ 8:48ಕ್ಕೆ ಡಿಕೆಶಿ ಪುತ್ರಿ ಐಶ್ಚರ್ಯಾಗೆ ಶಾಲಾ ಆಡಳಿತ ಮಂಡಳಿ ಫಾರ್ವರ್ಡ್‌ ಮಾಡಿದೆ. ಸದ್ಯ ಆರ್ ಆರ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹುಚ್ಚ ವೆಂಕಟ್ ಹೆಸರಲ್ಲಿ ಶಾಲೆಗೆ ಬೆದರಿಕೆ ಸಂದೇಶ ಕಳುಹಿಸಿದವರನ್ನ ಪತ್ತೆ ಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. 


ಇದನ್ನೂ ಓದಿ : GST Rates Hike: ಬಡವರ ಹೊಟ್ಟೆಗೆ ಒದೆಯುವುದೇ ಪ್ರಧಾನಿ ಮೋದಿಯವರ ‘ಅಚ್ಚೇ ದಿನ್’- ಸಿದ್ದರಾಮಯ್ಯ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.