ಬೆಂಗಳೂರು: ವಿದ್ಯುತ್ ಚಾಲಿತ ವಾಹನ ತಯಾರಿಕೆ ಕ್ಷೇತ್ರದಲ್ಲಿ ಹೆಸರು ಮಾಡಿರುವ ಏಥರ್ ಕಂಪನಿಯು ರಾಜ್ಯವನ್ನು ಬಿಟ್ಟು ಮಹಾರಾಷ್ಟ್ರಕ್ಕೆ ಸ್ಥಳಾಂತರಗೊಳ್ಳುವ ನಿರ್ಧಾರ ಮಾಡಿರುವುದಕ್ಕೆ ಹಿಂದಿನ ಬಿಜೆಪಿ ಸರಕಾರದ ವೈಫಲ್ಯವೇ ಮೂಲ ಕಾರಣ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಗುರುವಾರ ಹೇಳಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ ಸೆಮಿಫೈನಲ್’ಗೂ ಮುನ್ನ ಮಹತ್ವದ ಹೇಳಿಕೆ ನೀಡಿದ ನಾಯಕ ರೋಹಿತ್ ಶರ್ಮಾ! ಏನಂದ್ರು ಕ್ಯಾಪ್ಟನ್
ಬಿಜೆಪಿ ಹಾಗೂ ಆ ಪಕ್ಷದ ಶಾಸಕ ಅರವಿಂದ ಬೆಲ್ಲದ ಅವರು ರಾಜ್ಯ ಕಾಂಗ್ರೆಸ್ ಸರಕಾರದ ಬೇಜವಾಬ್ದಾರಿಯಿಂದಾಗಿ ಏಥರ್ ಕಂಪನಿ ರಾಜ್ಯದಿಂದ ಕಾಲ್ತೆಗೆದಿದೆ ಎಂದು ಮಾಡಿರುವ ಆರೋಪಕ್ಕೆ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಸರಕಾರವಿದ್ದಾಗ ಏಥರ್ ಕಂಪನಿಯು ತನ್ನ ಘಟಕ ಸ್ಥಾಪಿಸಲು 50 ಎಕರೆ ಜಮೀನು ಕೇಳಿತ್ತು. ಆದರೆ ಅವರ ಸರಕಾರವು ಕೇವಲ 35 ಎಕರೆ ಮಂಜೂರು ಮಾಡಿತು. ಇದರಲ್ಲೂ ಐದು ಎಕರೆ ವಿವಾದಕ್ಕೆ ಒಳಗಾಗಿತ್ತು. ಇದರಿಂದ ರೋಸಿ ಹೋದ ಕಂಪನಿಯು ಇಡೀ 50 ಎಕರೆಯನ್ನು ಸರಕಾರಕ್ಕೆ ವಾಪಸ್ ಒಪ್ಪಿಸಿತು. ಇದಾದ ಮೇಲೆ ಆ ಕಂಪನಿಯು ಬೇರೆಬೇರೆ ಕಾರಣಗಳಿಗೋಸ್ಕರ ರಾಜ್ಯವನ್ನು ಬಿಟ್ಟು ಮಹಾರಾಷ್ಟ್ರಕ್ಕೆ ತೆರಳಿ, ಅಲ್ಲಿ ಹೂಡಿಕೆ ಮಾಡುವ ತೀರ್ಮಾನ ಕೈಗೊಂಡಿತು ಎಂದು ವಿವರಿಸಿದ್ದಾರೆ.
ಹಿಂದಿನ ಬಿಜೆಪಿ ಸರಕಾರವು ಎಲ್ಲದರಲ್ಲೂ ವಿಫಲವಾಗಿತ್ತು. ಈಗ ಆ ಪಕ್ಷದ ನಾಯಕರು ಏಥರ್ ಕಂಪನಿಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅವರ ಕಾಲದಲ್ಲಿ ಓಲಾ ಕಂಪನಿಯು ರಾಜ್ಯದಿಂದ ತಮಿಳುನಾಡಿಗೆ ಹೋಯಿತು. ಬೆಲ್ಲದ್ ಅವರು ಇದನ್ನು ನೆನಪು ಮಾಡಿಕೊಳ್ಳಬೇಕು ಎಂದು ಕುಟುಕಿದ್ದಾರೆ.
ಇದನ್ನೂ ಓದಿ: ಒಗ್ಗರಣೆಗೆ ಬಳಸುವ ಈ ಬಿಳಿ ಪದಾರ್ಥದ ಚಟ್ನಿ ಗಂಟುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರಹೋಗುವಂತೆ ಮಾಡುತ್ತೆ!
ಇಷ್ಟಾದರೂ ನಾವು ಏಥರ್ ಕಂಪನಿಗೆ ನಮ್ಮ ಸರಕಾರ ಬಂದಮೇಲೆ ಏಕಗವಾಕ್ಷಿ ಯೋಜನೆಯಡಿ ಹರಳೂರು-ಮುದ್ದೇನಹಳ್ಳಿ ನಡುವೆ 50 ಎಕರೆ ಜಮೀನು ಕೊಡುವುದಾಗಿ ಹೇಳಿತು. ಆ ವೇಳೆಗಾಗಲೇ ಅವರು ಮಹಾರಾಷ್ಟ್ರ ಕ್ಕೆ ಹೋಗಿ ಆಗಿತ್ತು ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.