KSRTC Bus: ಶಿವಸೇನೆ ಪುಂಡಾಟಿಕೆ; ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಬಂದ್!

ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಉಭಯ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

Last Updated : Mar 13, 2021, 01:20 PM IST
  • ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
  • ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಉಭಯ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
  • ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಪ್ರತಿದಿನ 400 ಬಸ್ ಗಳು ಸಂಚರಿಸುತ್ತಿದ್ದರೆ, ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು.
KSRTC Bus: ಶಿವಸೇನೆ ಪುಂಡಾಟಿಕೆ; ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಬಂದ್! title=

ಬೆಂಗಳೂರು: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಉಭಯ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಪ್ರತಿದಿನ 400 ಬಸ್(Bus) ಗಳು ಸಂಚರಿಸುತ್ತಿದ್ದರೆ, ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು.

Petrol-Diesel: 'ಬಡ, ಮಧ್ಯಮ ವರ್ಗಕ್ಕೆ ಕೈಗೆಟುಕುವ ದರದಲ್ಲಿ ಸಿಗಲಿದೆ ಶೀಘ್ರದಲ್ಲಿ ಪೆಟ್ರೋಲ್'

ಶಿವಸೇನೆ ಕಾರ್ಯಕರ್ತರು ಕೊಲ್ಹಾಪುರದಲ್ಲಿ ಕನ್ನಡ ನಾಮಫಕ(Kannada Bord)ಗಳಿಗೆ ಮಸಿ ಬಳಿದು, ಅಂಗಡಿ, ಮುಂಗಟ್ಟುಗಳ ಮಾಲೀಕರಿಗೆ ಕನ್ನಡ ನಾಮಫಲಕ ಹಾಕಿದರೆ ವ್ಯಾಪಾರ ನಡೆಸಲು ಅವಕಾಶ ನಿಡುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದರು. ಇದರ ಬೆನ್ನಲ್ಲೇ ನಿನ್ನೆ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಶಿವಸೇನೆ ಕಚೇರಿ ಮೇಲೆ ದಾಳಿ ನಡೆಸಿದ್ದರಲ್ಲದೇ ಬೆಳಗಾವಿಯಲ್ಲಿ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು.

ಮಾಜಿ ಸಿಎಂ ವೀರಪ್ಪ ಮೊಯಿಲಿಗೆ 2020 ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಈ ವೇಳೆ ಕರವೇ ಹಾಗೂ ಶಿವಸೇನೆ ಕಾರ್ಯಕರ್ತರ(Shivasene Worker) ನಡುವೆ ಘರ್ಷಣೆ ಸಂಭವಿಸಿದ್ದು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಕೊಲ್ಹಾಪುರ ಹಾಗೂ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾ ಪಟ್ಟಿ ಪ್ರಕಟ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News