ಕೊಳವೆ ಬಾವಿ ನೀರು ಕಲುಷಿತ-ಟ್ಯಾಂಕರ್ ಮೂಲಕ ಸರಬರಾಜಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
Karnataka News: ಕಲುಷಿತ ನೀರು ಸೇವಿಸಿ 20 ಮಂದಿ ಅಸ್ವಸ್ಥರಾಗಿದ್ದು, 8 ಮಂದಿ ಹರಪನಹಳ್ಳಿ ಸರ್ಕಾರಿ ಆಸ್ಪತ್ರೆ ಹಾಗೂ ಮೂವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.
ಬೆಂಗಳೂರು: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಣಿವೆಹಳ್ಳಿ ಗ್ರಾಮದ ಒಂದು ನಿರ್ದಿಷ್ಟ ಕೊಳವೆಬಾವಿಯ ನೀರು ಕಲುಷಿತವಾಗಿರುವುದು ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಕೊಳವೆ ಬಾವಿ ನೀರು ಪೂರೈಕೆ ಸ್ಥಗಿತಗೊಳಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ಇದನ್ನೂ ಓದಿ: ಕಠಿಣ ಪರಿಶ್ರಮವೊಂದೇ ಯಶಸ್ಸಿನ ಕೀಲಿಕೈ: ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣಭೈರೇಗೌಡ ಕಿವಿಮಾತು
ಕಲುಷಿತ ನೀರು ಸೇವಿಸಿ 20 ಮಂದಿ ಅಸ್ವಸ್ಥರಾಗಿದ್ದು, 8 ಮಂದಿ ಹರಪನಹಳ್ಳಿ ಸರ್ಕಾರಿ ಆಸ್ಪತ್ರೆ ಹಾಗೂ ಮೂವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಒಬ್ಬರನ್ನು ದಾವಣಗೆರೆ ಸಿಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಆ ವ್ಯಕ್ತಿಯ ಆರೋಗ್ಯವೂ ಸುಧಾರಣೆಯಾಗುತ್ತಿದೆ.
ಕಲುಷಿತ ನೀರು ಸರಬರಾಜಾಗುತ್ತಿದ್ದ ಪ್ರದೇಶದಿಂದ 16 ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಗ್ರಾಮದಲ್ಲಿ ತಾತ್ಕಾಲಿಕ ಶಿಫ್ಟ್ ಆಸ್ಪತ್ರೆಯನ್ನು ಸ್ಥಾಪಿಸಲಾಗಿದ್ದು, ನಿರಂತರ ಕಣ್ಗಾವಲು ಮತ್ತು ಅನುಸರಣೆ ಮಾಡಲಾಗುತ್ತಿದೆ.
ಇದನ್ನೂ ಓದಿ: ಸಿದ್ದನೆಪ ಹೇಳದೆ ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಪತ್ರಿಕೆಗಳಲ್ಲಿ ವರದಿ ಪ್ರಕಟವಾಗುತ್ತಿದ್ದಂತೆಯೇ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವವರ ಬಗ್ಗೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಸೂಚನೆ ನಿಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.