ಚಾಮರಾಜನಗರ: ಅರಣ್ಯ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿಗೆ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾ ಬಲೆಗೆ ಆರ್ಎಫ್ಒ ಬಿದ್ದಿರುವ ಘಟನೆ ಹನೂರು ತಾಲೂಕಿನ ಕೌದಳ್ಳಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಮಲೆಮಹದೇಶ್ವರ ವನ್ಯಜೀವಿಧಾಮದ ಕೌದಳ್ಳಿ ಆರ್ ಎಫ್ ಒ ಕಾಂತರಾಜ್ ಚೌಹಾಣ್ ಲೋಕಾ ಬಲೆಗೆ ಬಿದ್ದ ಅಧಿಕಾರಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ ರೋಡ್ ಅರಣ್ಯ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಮಾಡಲು ಗ್ರಾಮ ಪಂಚಾಯಿತಿ ಸದಸ್ಯ ಜೋಸೆಫ್ ಆಳ್ಬಗನ್ ನಿಂದ 60 ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.


ಇದನ್ನೂ ಓದಿ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿ ಡಿ.ಕೆ.ಸುರೇಶ್


ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ ರೋಡ್ ಅರಣ್ಯ ಪ್ರದೇಶ ವ್ಯಾಪ್ತಿಯ ಮೊರನೂರು ಹುಣಸೆ ಮರ ಬಾವಿಯ ಹತ್ತಿರ 10 ಲಕ್ಷ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲು ಕ್ರೀಯಾ ಯೋಜನೆ ಸಲ್ಲಿಸಿ ಅನುಮೋದನೆ ಪಡೆದುಕೊಳ್ಳಲಾಗಿತ್ತು. ಆದರೆ ವಲಯ ಅರಣ್ಯಾಧಿಕಾರಿ ಕಾಮಗಾರಿ ನಡೆಸಬೇಕಾದರೇ  ತನಗೆ 80 ಸಾವಿರ ಹಣ ನೀಡಬೇಕು. ಇಲ್ಲದಿದ್ದರೆ, ಕಾಮಗಾರಿ ನಡೆಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.


ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯದ್ದೇ ಗೆಲುವು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ


ಲಂಚದಿಂದ ಬೇಸತ್ತ ಗ್ರಾಮ ಪಂಚಾಯಿತಿ ಸದಸ್ಯ ಜೋಸೆಫ್ ಆಳ್ಬಗನ್ ಚಾಮರಾಜನಗರ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.ದೂರು ನೀಡುವ ವೇಳೆ ಈಗಾಗಲೇ ವಲಯ ಅರಣ್ಯಾಧಿಕಾರಿಗೆ ಮುಂಗಡ ಹಣವಾಗಿ 20 ಸಾವಿರ ಮೇಲಿರುವುದಾಗಿಯೂ ಮಾಹಿತಿ ನೀಡಿದ್ದರು.ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಉಳಿಕೆ 60 ಸಾವಿರ ನಗದು ಹಣ ಕೊಡುವಾಗ ದಾಳಿ ನಡೆಸಿ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ