ಬೆಂಗಳೂರು: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 


COMMERCIAL BREAK
SCROLL TO CONTINUE READING

ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು. 


ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು. 


ಇದನ್ನೂ ಓದಿ- "ಮೋದಿಯವರೇ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು, ಎಲ್ಲಿವೆ ತೋರಿಸಿ..?


ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.


ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ಕರೆ  ನೀಡಿದರು. 


ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು ಎಂದರು.


ಇದನ್ನೂ ಓದಿ- ನಾನು ನಾಸ್ತಿಕನಲ್ಲ ಆಸ್ತಿಕ, ನಮ್ಮೂರಲ್ಲೂ ರಾಮನ ಗುಡಿಯಿದೆ: ಸಿಎಂ ಸಿದ್ದರಾಮಯ್ಯ


ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ವಿವರಿಸಿದರು. 


ಆದಿ ಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.