ಚಾಮರಾಜನಗರ: ಕಳೆದ 1 ತಿಂಗಳಿನಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು  ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಇಂದು ಪೊರಕೆ ಚಳವಳಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದಿಂದ ಭುವನೇಶ್ವರಿ ವೃತ್ತದ ತನಕ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಪೊರಕೆ ಹಿಡಿದು ಮೆರವಣಿಗೆ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು‌.


ಇದನ್ನೂ ಓದಿ- ಜನರಿಗೆ ಪೌಷ್ಠಿಕ ಆಹಾರ ತಲುಪಿಸಲು ಸರ್ಕಾರ ನೆರವು


ಕಾವೇರಿ ನೀರನ್ನು ತಮಿಳುನಾಡಿನ 3 ಬೆಳೆಗೆ ಹರಿಸಲಾಗುತ್ತಿದೆ. ಆದರೆ, ನಮ್ಮಲ್ಲಿ ಕುಡಿಯಲು ನೀರಿಲ್ಲ, ತರಕಾರಿ ಬೆಳೆಗಳು ಒಣಗುತ್ತಿವೆ. ನಮ್ಮ ರೈತರು, ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು‌. 


ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು, ನೀರು ಹರಿಸಿ ಮತ್ತೆ ಮತ್ತೆ ರೈತರನ್ನು ಸಂಕಷ್ಟಕ್ಕೆ ದೂಡಬಾರದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಗಾಯದ ಮೇಲೆ ಬರೆ ಎಳೆಯುತ್ತಿದ್ದು ವಾಸ್ತವ ಸ್ಥಿತಿ ಅರಿತು ಸಂಕಷ್ಟ ಸೂತ್ರ ಕೊಡಲಿ ಎಂದು ಹೋರಾಟಗಾರರು  ಒತ್ತಾಯಿಸಿದರು.


ಇದನ್ನೂ ಓದಿ- ಮಾನಸಿಕವಾಗಿ ನೊಂದಿದ್ದ ಮಗನಿಗೆ ಹೆತ್ತವರಿಂದಲೇ ಗೃಹ ಬಂಧನ


ಇದೇ ರೀತಿ ರಾಜ್ಯಕ್ಕೆ ಅನ್ಯಾಯ ಮುಂದುವರೆದರೇ ತಮಿಳುನಾಡಿನ ಉತ್ಪನ್ನಗಳನ್ನು ಬಹಿಷ್ಕಾರ ಮಾಡುತ್ತೇವೆ, ತಮಿಳುನಾಡು ಗಡಿಯನ್ನು ಬಂದ್ ಮಾಡುತ್ತೇವೆ ಎಂದು ಹೋರಾಟಗಾರರು ಎಚ್ಚರಿಕೆ ಕೊಟ್ಟರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.