ಶಿವಮೊಗ್ಗ : ಮೂಡಾಹಗರಣದಲ್ಲಿ ತಮ್ಮ ವಿರುದ್ಧ ಸಾಕ್ಷಿಯನ್ನು ಇ.ಡಿ ಅಧಿಕಾರಿಗಳು ಸಂಗ್ರಹಿಸುತ್ತಿರುವುದರಿಂದ ಗಾಬರಿಗೊಂಡು ಇಡಿ ಅಧಿಕಾರಿಗಳಿಗೆ ತನಿಖೆ ಮಾಡಲು ಅಧಿಕಾರ ಇಲ್ಲ ಎಂದು ಸಿ ಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಮಾಜಿ ಸಿ ಎಂ ಯಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇ.ಡಿ ಅಧಿಕಾರಿಗಳ ಬಗ್ಗೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಡಿ ಅಧಿಕಾರಿಗಳಿಗೆ ತನಿಖೆ ಮಾಡಲು ಅಧಿಕಾರ ಇಲ್ಲ ಎಂದಿರುವ ಸಿ ಎಂ ಸಿದ್ದರಾಮಯ್ಯ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಮಾಜಿ ಸಿ ಎಂ ಯಡಿಯೂರಪ್ಪ ತಿಳಿಸಿದರು.


ಇದನ್ನೂ ಓದಿ : ಬಲ ಪ್ರದರ್ಶನ ಅಗತ್ಯವಿಲ್ಲ! ನಮ್ಮ ಆಚಾರ ವಿಚಾರ ಜನರಿಗೆ ತಲುಪಿಸಿದರೆ ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ


ನಂತರ ಬೆಳಗಾವಿ ಅಧಿವೇಶನದ ಬಗ್ಗೆ ಮಾತನಾಡಿ ಈ ಅಧಿವೇಶನದಲ್ಲಿ ನಮ್ಮ ಎಲ್ಲಾ ಶಾಸಕರು ಭಾಗವಹಿಸುತ್ತಾರೆ. ಸರ್ಕಾರದ ವೈಫಲ್ಯದ ಬಗ್ಗೆ ಜನತೆಗೆ ತಿಳಿಸುತ್ತಾರೆ ಎಂದರು. ಹಾಗೆಯೇ ರಾಜ್ಯಪಾಲರ ಅಧಿಕಾರವನ್ನು ಮೊಟುಕು ಗಳಿಸುವ ವಿಚಾರದ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಅವರ ಬಹಳ ಡೆಸ್ಪಿರೇಟ್‌ ಆಗಿ ಇಂತಹ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ  ಎಂದು ಯಡಿಯೂರಪ್ಪ ತಿಳಿಸಿದ್ದಾರೆ. 


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.