ಬೆಂಗಳೂರು: ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿ ಕಲ್ಲುತೂರಾಟ ನಡೆಸಿದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಕೇಂದ್ರ ಗೃಹ ಸಚಿವರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನ ಗೂಂಡಾ ರಾಜಕಾರಣಕ್ಕೆ ಹೆದರಿ ಓಡಿ ಹೋಗುವ ಹೇಡಿ ನಾನಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಲಾಗುವುದು. ಜೊತೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಗಮನಕ್ಕೂ ತರಲಾಗುವುದು. ಅಷ್ಟೇ ಅಲ್ಲ, ಜೆಡಿಎಸ್ ಗುಂಡಾ ರಾಜಕಾರಣವನ್ನು ವಿರೋಧಿಸಿ ಹಾಸನದಲ್ಲಿಯೇ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.


ಆಪರೇಶನ್ ಕಮಲ ಆಡಿಯೋದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಜೆಡಿಎಸ್ ಪಕ್ಷದ ಬಗ್ಗೆ, ಸಮ್ಮಿಶ್ರ ಸರ್ಕಾರದ ಹಗುರವಾಗಿ ಮಾತನಾಡಿದ್ದಾರೆ. ಅಲ್ಲದೆ, ಜೆಡಿಎಸ್ ಮುಖ್ಯಸ್ಥ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂಬ ವಿಚಾರವಾಗಿ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಬುಧವಾರ ಬೆಳಿಗ್ಗೆ ಶಾಸಕ ಪ್ರೀತಂ ಗೌಡ ಮನೆ ಮೇಲೆ ಕಲ್ಲುತೂರಾಟ ನಡೆಸಿ, ಪ್ರತಿಭಟನೆ ನಡೆಸಿದ್ದರು.  ಈ ಘಟನೆಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತ ತೀವ್ರ ಗಾಯಗೊಂಡಿದ್ದಾಗಿ ವರದಿಯಾಗಿದೆ.