ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಶಾಸಕರಿಗೆ ಯಡಿಯೂರಪ್ಪ ಸೂಚನೆ

ಮೇ 6 ರಿಂದ ಮೇ 17 ರವರೆಗೂ 11 ದಿನಗಳ ಕಾಲ ಕುಂದಗೋಳ, ಚಿಂಚೋಳಿ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಬಿಜೆಪಿ ತೀರ್ಮಾನಿಸಿದ್ದು, ಪಕ್ಷದ ಎಲ್ಲಾ 104 ಶಾಸಕರೂ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

Last Updated : Apr 30, 2019, 02:22 PM IST
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಶಾಸಕರಿಗೆ ಯಡಿಯೂರಪ್ಪ ಸೂಚನೆ title=

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮೇ 19ರಂದು ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಶಾಸಕರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. 

ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಕುಂದಗೋಳದಿಂದ ಎಸ್.ಐ.ಚಿಕ್ಕನಗೌಡರ್, ಚಿಂಚೊಳ್ಳಿಯಿಂದ ಅವಿನಾಶ್ ಜಾಧವ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು, ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಮೇ 6 ರಿಂದ ಮೇ 17 ರವರೆಗೂ 11 ದಿನಗಳ ಕಾಲ ಕುಂದಗೋಳ, ಚಿಂಚೋಳಿ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಬಿಜೆಪಿ ತೀರ್ಮಾನಿಸಿದ್ದು, ಪಕ್ಷದ ಎಲ್ಲಾ 104 ಶಾಸಕರೂ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಶತಾಯಗತಾಯ ಗೆಲುವು ಸಾಧಿಸಲು ನಿರ್ಧರಿಸಿದೆ.

ಈಗಾಗಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಾಗಿ ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ಸುಭಾಷ್ ರಾಠೋಡ, ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಕುಸುಮಾ ಶಿವಳ್ಳಿ ಸ್ಪರ್ಧಿಸುತ್ತಿದ್ದು, ಮೈತ್ರಿ ಪಕ್ಷಗಳು ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿವೆ. 
 

Trending News