ಬೆಂಗಳೂರು: ಬೆಂಗಳೂರಿನ ರಾಚೇನಹಳ್ಳಿ ಡಿನೋಟಿಫಿಕೇಷನ್​ ಪ್ರಕರಣ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಅವರಿಗೆ ಕ್ಲೀನ್​ ಚಿಟ್​ ನೀಡಿ ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಇದರಿಂದಾಗಿ ಬಿಎಸ್ವೈಗೆ ಬಿಗ್ ರಿಲೀಫ್ ಸಿಕ್ಕಿದೆ.


COMMERCIAL BREAK
SCROLL TO CONTINUE READING

ರಾಚೇನಹಳ್ಳಿ ಸೇರಿದಂತೆ ವಿವಿಧ ಡಿನೋಟಿಫಿಕೇಷನ್‌ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ವಕೀಲ ಸಿರಾಜಿನ್‌ ಪಾಷಾ ಮತ್ತು ಬಾಲಕೃಷ್ಣ ಎಂಬುವವರು ಲೋಕಾಯುಕ್ತ ನ್ಯಾಯಾಲಯದಲ್ಲಿ ಐದು ಖಾಸಗಿ ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಕೋರ್ಟ್​ ಈಗ ವಜಾಗೊಳಿಸಿ ಆದೇಶಿಸಿದೆ. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪ್ರಕರಣವನ್ನು ವಜಾಗೊಳಿಸುತ್ತಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ. ಈ ಹಿಂದೆ ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್ ಆದೇಶಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್​.ಆರ್​. ಹಿರೇಮಠ್​ ಅರ್ಜಿ ಸಲ್ಲಿಸಿದ್ದರು. ಜತೆಗೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುವಂತೆಯೂ ಹಿರೇಮಠ್​ ಮನವಿ ಮಾಡಿದ್ದರು.


ಸುಪ್ರೀಂ ಕೋರ್ಟ್ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯಕ್ಕೆ ಈ ಪ್ರಕರಣವನ್ನು ವರ್ಗಾಯಿಸಿತ್ತು. ಈ ಪ್ರಕರಣಗಳ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ವಿ. ಪಾಟೀಲ್​ ಆ.28 ರಂದು ಈ ಆದೇಶವನ್ನು ಹೊರಡಿಸಿದ್ದಾರೆ.