Siddaramaiah vs BS Yediyurappa: ಇಳಿವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡಿವ ಯಾವುದೇ ನೈತಿಕತೆ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮುಡಾ ಹಗರಣ ಸಂಬಂಧ ಯಡಿಯೂರಪ್ಪನವರು ಸಿದ್ದರಾಮಯ್ಯರ ರಾಜೀನಾಮೆಗೆ ಆಗ್ರಹಿಸಿದ್ದರು. ನಾಚಿಕೆ, ಮಾನ-ಮರ್ಯಾದೆ ಇದ್ದರೆ ಶೀಘ್ರವೇ ಖುರ್ಚಿ ಬಿಟ್ಟು ಇಳಿಯಲಿ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದರು. ಬಿಎಸ್‌ವೈ ಹೇಳಿಕೆಗೆ ಸಿದ್ದರಾಮಯ್ಯನವರು ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ʼಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪನವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ನೈತಿಕತೆ ಇದ್ದರೆ ಅವರು ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು ಅಂತಾ ಆಗ್ರಹಿಸಿದ್ದಾರೆ. 


ಮನೆ ಬಾಗಿಲಿಗೆ ಆರೋಗ್ಯ ಸೇವೆಗೆ ಕೌಂಟ್‌ ಡೌನ್‌


ಮೃತ ಪಿಎಸ್‌ಐ ಮನೆಗೆ ಭೇಟಿ ನೀಡಲಿರುವ ಗೃಹ ಸಚಿವ ಜಿ ಪರಮೇಶ್ವರ್‌


ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆ ಬದಲಿ ನಿವೇಶನಕ್ಕೆ ಕೋರಿ 2014ರಲ್ಲಿ ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬಿಜೆಪಿ ಮತ್ತು ಜೆಡಿಎಸ್‌ ಸೇರಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಇಲ್ಲಸಲ್ಲದ ಆಪಾದನೆ ಮಾಡುತ್ತಿದ್ದಾರೆ. ʼಆಪರೇಶನ್‌ ಕಮಲʼ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಹೀಗೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.