ಬಹುಮತ ಇಲ್ಲದಿದ್ದರೂ ಬಿಎಸ್‌ವೈ ಸಿಎಂ ಆಗುತ್ತಿರುವ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ: ಸಿದ್ದರಾಮಯ್ಯ

ಬಹುಮತ ಇಲ್ಲದಿದ್ದರೂ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಳು ಹೊರಟಿರುವುದು ಮತ್ತು ಈ ತರಾತುರಿ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Last Updated : Jul 26, 2019, 11:57 AM IST
ಬಹುಮತ ಇಲ್ಲದಿದ್ದರೂ ಬಿಎಸ್‌ವೈ ಸಿಎಂ ಆಗುತ್ತಿರುವ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ: ಸಿದ್ದರಾಮಯ್ಯ title=

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲು ಮುಂದಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೇ ಮಾರಕ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಹುಮತ ಇಲ್ಲದಿದ್ದರೂ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಳು ಹೊರಟಿರುವುದು ಮತ್ತು ಈ ತರಾತುರಿ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು- ಎರಡೂ ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆಯಾಗಿದೆ. ಸಿಎಂ ಆಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲು ಮುಂದಾಗಿರುವುದು ಸಂವಿಧಾನದ ಮೇಲೆ ಬಿಜೆಪಿಗೆ ನಂಬಿಕೆಯಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಬೆನ್ನಲ್ಲೇ ಹೈಕಮ್ಯಾಂಡ್ ಜೊತೆ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರನ್ನು ಭೇಟಿಯಾಗಿ ಅನುಮತಿ ಪಡೆದಿದ್ದಾರೆ. ಅದರಂತೆ ಇಂದು ಸಂಜೆ 6 ರಿಂದ 6.15ರೊಳಗೆ ಯಡಿಯುರಪ್ಪ ಅವರು ರಾಜ್ಯದಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Trending News