ಬೆಂಗಳೂರು: ಇಂದು ಸಂಜೆ 6 ಗಂಟೆಗೆ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈಗಾಗಲೇ 3 ಸಾವಿರ ಪಾಸ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಸೂಕ್ತ ಭದ್ರತೆ ಕೈಗೊಳ್ಳುವ ಸಲುವಾಗಿ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಸುದ್ದಿಗಾರರೊಂದಿಜ್ಞೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಇಂದು ಸಂಜೆ ರಾಜಭವನದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಪ್ರಮಾಣವಚನ ಸಮರ್ಮಭಕ್ಕೆ ಸಿದ್ಧತೆ ನಡೆಸಿದ್ದು, ಇದಕ್ಕಾಗಿ ಸೂಕ್ತ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ 1 ಸಾವಿರ ಪೋಲಿಸರನ್ನು ನಿಯೋಜಿಸಲಾಗಿದೆ. ಪ್ರಮಾಣವಚನ ಸಮಾರಂಭಕ್ಕೆ ಕೇಂದ್ರ ನಾಯಕರು ಬಂದರೆ ಹೆಚ್ಚುವರಿ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು.


ಬಿಎಸ್‌ವೈ ಸಿಎಂ ಆಗಿ ಪ್ರತಿಜ್ಞಾವಿಧಿ ಹಿನ್ನೆಲೆ ರಾಜಭವನದ ಸುತ್ತ ಪೊಲೀಸ್ ಬಿಗಿ ಭದ್ರತೆ:
ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸುವ ಹಿನ್ನೆಲೆಯಲ್ಲಿ ರಾಜಭವನದ ಸುತ್ತ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ನಾಲ್ಕು ಬಿಎಂಟಿಸಿ ಬಸ್ ಗಳಲ್ಲಿ ರಾಜಭವನದತ್ತ ಆಗಮಿಸಿದ ಪೊಲೀಸರು ರಾಜಭವನದ ಮುಂದೆ ಬೀಡು ಬಿಟ್ಟಿದ್ದಾರೆ. ಅಲ್ಲದೆ,  ರಾಜಭವನದ ಮುಂದೆ ಬ್ಯಾರಿಕೇಡ್ ಅಳವಡಿಸಲಾಗಿದೆ.