ಬೆಂಗಳೂರು: ರೈತ ನಾಯಕ ಎಂದೇ ಕೀರ್ತಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರುತ್ತ ಅವರ ಬಗೆಗಿನ ಒಂದಿಷ್ಟು ಮಾಹಿತಿ ನಿಮಗಾಗಿ. 


COMMERCIAL BREAK
SCROLL TO CONTINUE READING

ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ  ಫೆಬ್ರವರಿ 27, 1943 ರಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಜನಿಸಿದರು. ವಿದ್ಯಾಭ್ಯಾಸದ ನಂತರ 1965ರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ನೇಮಕಗೊಂಡರು. ಆನಂತರದಲ್ಲಿ ಕೆಲಸವನ್ನು ತೊರೆದು ಶಿಕಾರಿಪುರದಲ್ಲಿರುವ ಅವರ ಮಾವನ ರೈಸ್ ಮಿಲ್ನಲ್ಲಿ ಕೆಲಸಕ್ಕೆ ಸೇರಿದರು. 70ರ ದಶಕದಲ್ಲಿ ರಾಜಕೀಯ ಪ್ರವೇಶ ಮಾಡಿದರು. ನಂತರ ಕರ್ನಾಟಕದ ವಿಧಾನ ಸಭಾ ಕ್ಷೇತ್ರದಿಂದ ಮತ್ತು ಲೋಕಸಭಾ ಕ್ಷೇತ್ರಗಳಿಗೆ ಹಲವುಬಾರಿ ಆಯ್ಕೆಯಾಗಿದ್ದಾರೆ. 


ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ.ಕುಮಾರ ಸ್ವಾಮಿ ನಂತರ ನವೆಂಬೆರ್ 12, 2007ರಲ್ಲಿ  ಬಿ.ಎಸ್.ಯಡಿಯೂರಪ್ಪ ಕೇವಲ 7 ದಿನಗಳ ಕಾಲ ಮುಖ್ಯಮಂತ್ರಿಗಳಾಗಿದ್ದರು. 2008ರಲ್ಲಿ ನಡೆದ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಿತು.  ಮೇ 30, 2008 ರಂದು ಬಿ.ಎಸ್.ಯಡಿಯೂರಪ್ಪ ಮತ್ತೆ ಅಧಿಕಾರವಹಿಸಿಕೊಂಡರು. ಈ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎನಿಸಿಕೊಂಡರು. 2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದು ಸಂಸದರಾಗಿದ್ದಾರೆ.