Breaking News: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್.ಯಡಿಯೂರಪ್ಪ

ಕೊನೆಗೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್.ಯಡಿಯೂರಪ್ಪ

Written by - Zee Kannada News Desk | Last Updated : Jul 26, 2021, 02:14 PM IST
  • ಕೊನೆಗೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್.ಯಡಿಯೂರಪ್ಪ
  • ‘ನಾನು ದುಃಖದಿಂದ ಅಲ್ಲ, ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ’
  • ‘ಮುಖ್ಯಮಂತ್ರಿಯಾಗಿ 2 ವರ್ಷ ಅಧಿಕಾರ ನಡೆಸಲು ಅವಕಾಶ ಕೊಟ್ಟ ರಾಷ್ಟ್ರೀಯ ನಾಯಕರಿಗೆ ಧನ್ಯವಾದ’
Breaking News: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್.ಯಡಿಯೂರಪ್ಪ   title=
ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದಾರೆ. ದುಃಖದಿಂದ ಅಲ್ಲ ನಾನು ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ. ರಾಜ್ಯಪಾಲರನ್ನು ಭೇಟಿ ಮಾಡಿ ನನ್ನ ರಾಜೀನಾಮೆಯನ್ನು ಸಲ್ಲಿಸಲಿದ್ದೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ 2ನೇ ವರ್ಷದ ಬಿಜೆಪಿ ಸರ್ಕಾರದ ಸಾಧನಾ ಸಮಾವೇಶ ಉದ್ಘಾಟಿಸಿ ಬಿ.ಎಸ್.ಯಡಿಯೂರಪ್ಪ(BS Yediyurappa) ಅತ್ಯಂತ ಭಾವುಕರಾಗಿ ಮಾತನಾಡಿದರು. ಈ ವೇಳೆ ಅವರು ತಮ್ಮ ಹೋರಾಟದ ಹಳೆಯ ದಿನಗಳನ್ನು ನೆನಪು ಮಾಡಿಕೊಂಡರು. ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿದ ನಾನು ಶಿವಮೊಗ್ಗದ ಶಿಕಾರಿಪುರದಲ್ಲಿ ಬೆಳೆದು ಅಲ್ಲಿಂದ ರಾಜಕೀಯ ನಾಯಕನಾಗಿ ಹೊರಹೊಮ್ಮಿದ್ದೇನೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ 2008ರಲ್ಲಿ ಸ್ವಂತ ಬಲದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ರಾಜ್ಯದ ಜನತೆ ನನಗೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Karnataka Unlock 5.O : ರಾಜ್ಯದಲ್ಲಿ ಮತ್ತೆ ಅನ್ಲಾಕ್ 5.O : ನಾಳೆಯಿಂದ ಯಾವುದುಕ್ಕೆಲ್ಲ ಸಡಿಲಿಕೆ? 

75 ವರ್ಷ ದಾಟಿದ ವ್ಯಕ್ತಿಗೆ ಯಾವುದೇ ಸ್ಥಾನಮಾನ ಕೊಡುವುದಿಲ್ಲವೆಂದು ಬಿಜೆಪಿ ತೀರ್ಮಾನ ತೆಗೆದುಕೊಂಡಿತ್ತು. ಆದರೆ ನನಗೆ 2 ವರ್ಷ ಹೆಚ್ಚಿಗೆ ಮುಖ್ಯಮಂತ್ರಿಯಾಗಲು ರಾಷ್ಟ್ರೀಯ ನಾಯಕರು ಅವಕಾಶ ನೀಡಿದರು. ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ. ಪಕ್ಷದಿಂದ ನನಗೆ ಎಲ್ಲ ರೀತಿಯ ಸ್ಥಾನಮಾನವೂ ಸಿಕ್ಕಿದೆ. ಮುಖ್ಯಮಂತ್ರಿಯಾಗಿ 2 ವರ್ಷ ಅಧಿಕಾರ ನಡೆಸಲು ನನಗೆ ಅವಕಾಶ ಮಾಡಿಕೊಟ್ಟ ಪ್ರಧಾನಿ ಮೋದಿ(Narendra Modi) ಮತ್ತು ಅಮಿತ್ ಶಾ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನಾನು ದುಃಖದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿಲ್ಲ. ಅತ್ಯಂತ ಸಂತೋಷದಿಂದಲೇ ರಾಜೀನಾಮೆ ನೀಡಲಿದ್ದೇನೆ. ವಿಧಾನಸೌಧದಿಂದ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತೇನೆ ಅಂತಾ ಬಿಎಸ್​ವೈ  ಹೇಳಿದರು.

ಇದನ್ನೂ ಓದಿ: ವಲಸಿಗ ಸಚಿವರು ವಾಪಸ್ ಬಂದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ

ಮುಂದಿನ ಲೋಕಸಭಾ ಚುನಾವಣೆ(LokSabha Elections)ಯಲ್ಲಿಯೂ ಪ್ರಧಾನಿ ಮೋದಿ-ಅಮಿತ್ ಶಾ ಜೋಡಿ ಗೆಲುವು ಸಾಧಿಸುವ ಮೂಲಕ ದೇಶವನ್ನು ಮುನ್ನಡೆಸಿಕೊಂಡು ಹೋಗಬೇಕೆಂದು ನಾನು ಆಶಿಸುತ್ತೇನೆ. ನಾನು ಕೂಡ ರಾಜ್ಯದಲ್ಲಿ ಪಕ್ಷವನ್ನು ಕಟ್ಟಲು ಮುಂದಿನ ದಿನಗಳಲ್ಲಿ ಶ್ರಮಿಸುತ್ತೇನೆ ಅಂತಾ ಬಿಎಸ್​ವೈ ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News