ಬೆಂಗಳೂರು: ಬಿಜೆಪಿಯ ನೂತನ ಸಂಸದೀಯ ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಸ್ಥಾನ ದೊರೆತಿದೆ. ಬಿಎಸ್‍ವೈರನ್ನು ನೇಮಕ ಮಾಡಿರುವುದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.    


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ‘ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಪಕ್ಷದ ಅತ್ಯಂತ ಉನ್ನತವಾದ ಸಂಸದೀಯ ಮಂಡಳಿಗೆ ತಮ್ಮನ್ನು  ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕ್ಲಬ್ ಹೌಸ್ ಗ್ರೂಪ್‌ನಲ್ಲಿ ಡಿಪಿಗೆ ಪಾಕಿಸ್ತಾನ‌‌ದ ಧ್ವಜ ಹಾಕಿ ಅಗೌರವ: ಕಿಡಿಗೇಡಿಗಳ ವಿರುದ್ಧ FIR


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ


ಚುನಾವಣಾ ಸಮಿತಿಯಲ್ಲಿಯೂ ಬಿಎಸ್‌ವೈಗೆ ಸ್ಥಾನ


ನೂತನ ಕೇಂದ್ರ ಚುನಾವಣಾ ಸಮಿತಿಯನ್ನೂ ಬಿಜೆಪಿ ಪ್ರಕಟಿಸಿದ್ದುಇದರಲ್ಲಿಯೂ ಸಹ ಬಿ.ಎಸ್.ಯಡಿಯೂರಪ್ಪರಿಗೆ ಸ್ಥಾನ ಕಲ್ಪಿಸಲಾಗಿದೆ. 15 ಮಂದಿ ಸದಸ್ಯರ ಚುನಾವಣಾ ಸಮಿತಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಕೂಡ ಇದ್ದಾರೆ.


ಪ್ರಧಾನಿ ಮೋದಿಗೆ ಬಿಎಸ್‍ವೈ ಕೃತಜ್ಞತೆ


ಚುನಾವಣಾ ಸಮಿತಿಯಲ್ಲಿ ನನ್ನನ್ನು ಸದಸ್ಯನನ್ನಾಗಿ ನೇಮಿಸಿರುವ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆಗಳು. ನಮ್ಮ ಪಕ್ಷದ ಉನ್ನತ ಮಟ್ಟದ ಸಮಿತಿಯಲ್ಲಿ ಸೇವೆ ಸಲ್ಲಿಸುವ ಈ ಗೌರವಕ್ಕಾಗಿ ನಾನು ಆಭಾರಿಯಾಗಿದ್ದೇನೆ’ ಎಂದು ಬಿಎಸ್‍ವೈ ಟ್ವೀಟ್ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.