Pocso case: ಅಗತ್ಯವಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ- ಗೃಹ ಸಚಿವ ಪರಮೇಶ್ವರ್
POCSO Case: ಸಹಾಯ ಕೋರಿ ಯಡಿಯೂರಪ್ಪನವರ ನಿವಾಸಕ್ಕೆ ಹೋಗಿದ್ದ ವೇಳೆ ತಮ್ಮ ಪುತ್ರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಸಂಬಂಧ ಲೋಕಸಭಾ ಚುನಾವಣೆಗೂ ಮೊದಲು ಯಡಿಯೂರಪ್ಪನವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
POCSO Case: 17 ವರ್ಷದ ಬಾಲಕಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಅವರು ಬಂದು ನೊಟೀಸ್ಗೆ ಉತ್ತರ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ʼಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪನವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಅಗತ್ಯವಿದ್ದರೆ ಅವರನ್ನು ಬಂಧಿಸುತ್ತಾರೆ. ಅಗತ್ಯವಿದೆ ಅಂತಾ ನಾನು ಹೇಳಲು ಆಗುವುದಿಲ್ಲ. ಒಂದು ವೇಳೆ ಬಂಧಿಸಿದರೆ ಅವರು ಬಂದು ಉತ್ತರಿಸಬೇಕಾಗುತ್ತದೆʼ ಎಂದು ಪರಮೇಶ್ವರ್ ಹೇಳಿದ್ದಾರೆ.
ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ರೇಣುಕಾಸ್ವಾಮಿ ಕೊಲೆ ರಹಸ್ಯೆ
‘ಸ್ವಾಭಾವಿಕವಾಗಿ ಯಡಿಯೂರಪ್ಪನವರು ತಮ್ಮನ್ನು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕಿದೆ. ಅಷ್ಟರೊಳಗೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸುತ್ತಾರೆ. ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ’ ಎಂದು ತಿಳಿಸಿದರು.
ಏನಿದು ಪ್ರಕರಣ..?
ಸಹಾಯ ಕೋರಿ ಯಡಿಯೂರಪ್ಪನವರ ನಿವಾಸಕ್ಕೆ ಹೋಗಿದ್ದ ವೇಳೆ ತಮ್ಮ ಪುತ್ರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಸಂಬಂಧ ಲೋಕಸಭಾ ಚುನಾವಣೆಗೂ ಮೊದಲು ಯಡಿಯೂರಪ್ಪನವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು. ದೂರು ನೀಡಿದ್ದ ಮಹಿಳೆ ಇತ್ತೀಚೆಗಷ್ಟೇ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಇದನ್ನೂ ಓದಿ: ದರ್ಶನ್ ಕೊಲೆ ಪ್ರಕರಣ: ಮತ್ತೊಬ್ಬ ಸ್ಯಾಂಡಲ್ವುಡ್ ನಟ ಅರೆಸ್ಟ್
ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ರದ್ದುಪಡಿಸುವಂತೆ ಯಡಿಯೂರಪ್ಪನವರು ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾನು ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. FIR ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರ ವಿಚಾರಣೆ ವೇಳೆ ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಅಂತಾ ಯಡಿಯೂರಪ್ಪನವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧದ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ, ಹೀಗಾಗಿ ಅದನ್ನು ರದ್ದುಪಡಿಸಬೇಕೆಂದು ಅವರು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.