ಯಡಿಯೂರಪ್ಪರೇ ನಿಮ್ಮ ದ್ವೇಷ ಇರುವುದು ನನ್ನ ಬಗ್ಗೆ... ಬಡವರ ಮೇಲ್ಯಾಕೆ ಕೋಪ..? ಹೆಚ್‌ಡಿಕೆ

ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು 'ನಾಚಿಕೆಗೇಡಿನ ರಾಜಕೀಯ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

Last Updated : Sep 20, 2019, 01:32 PM IST
ಯಡಿಯೂರಪ್ಪರೇ ನಿಮ್ಮ ದ್ವೇಷ ಇರುವುದು ನನ್ನ ಬಗ್ಗೆ... ಬಡವರ ಮೇಲ್ಯಾಕೆ ಕೋಪ..? ಹೆಚ್‌ಡಿಕೆ

ಬೆಂಗಳೂರು: ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು 'ನಾಚಿಕೆಗೇಡಿನ ರಾಜಕೀಯ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಯಡಿಯೂರಪ್ಪರೇ ನಿಮ್ಮ ದ್ವೇಷ ಇರುವುದು ನನ್ನ ಬಗ್ಗೆ... ಬಡವರ ಮೇಲ್ಯಾಕೆ ಕೋಪ..? ಎಂದು ಪ್ರಶ್ನಿಸಿದ್ದಾರೆ.

ಆಪರೇಷನ್ ಕಮಲ ಕುಖ್ಯಾತಿಯ @BSYBJP  ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ತಮ್ಮ 'ಪಕ್ಷಪಾತಿ' ನಿಲುವನ್ನು ಪ್ರತಿಪಾದಿಸಿದ್ದಾರೆ. ಅಗತ್ಯವಿದ್ದರೆ ಮತ್ತಷ್ಟು ನೀಡಲಿ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು 'ನಾಚಿಕೆಗೇಡಿನ ರಾಜಕೀಯ' ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಲಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಯೋಜನೆಯನ್ನು ನಿರ್ಲಕ್ಷಿಸಿ ನೀವು ಬಡವರ ವಿರೋಧಿಯಾಗಿದ್ದೀರಿ?
ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೀದಿ ಬದಿಯ ವ್ಯಾಪಾರಿಗಳನ್ನು ಮೀಟರ್ ಬಡ್ಡಿ ದಂಡೆಯಿಂದ ರಕ್ಷಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ "ಬಡವರ ಬಂಧು" ಕಿರುಸಾಲ ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷದ ಬಗ್ಗೆ ಇತ್ತೀಚಿಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಕುರಿತ ಸರಣಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್‌ಡಿಕೆ, ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ ಯಡಿಯೂರಪ್ಪನವರೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿದ್ದ ನೀವು ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಮಾಡಿದ್ದೆಲ್ಲವೂ ಸೇಡಿನ ಕ್ರಮ. 'ಬಡವರ ಬಂಧು' ಯೋಜನೆಯನ್ನು ನಿರ್ಲಕ್ಷಿಸಿ ನೀವು ಬಡವರ ವಿರೋಧಿಯಾಗಿದ್ದೀರಿ ಎಂದಿದ್ದಾರೆ.

ಬಡವರ ಸ್ವಾಭಿಮಾನ ಕೆನಕಿದ್ದೀರಿ ಎಂದು ಬಿಎಸ್‌ವೈ ವಿರುದ್ಧ ಹೆಚ್‌ಡಿಕೆ ಆಕ್ರೋಶ:
'ಬಡವರ ಬಂಧು' ಹೆಸರೇ ಸೂಚಿಸುವಂತೆ ಆರ್ಥಿಕವಾಗಿ ಅಶಕ್ತರಾದವರಿಗೆ ಸಹಾಯ ಮಾಡಲು ಮೈತ್ರಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ, ಸಣ್ಣ ವ್ಯಾಪಾರಿಗಳನ್ನು ಲೇವಾದೇವಿದಾರರ ವಿಷವರ್ತುಲದಿಂದ ಪಾರು ಮಾಡುವ ಸದುದ್ದೇಶವನ್ನು ಹೊಂದಿದ್ದ ಕಾರ್ಯಕ್ರಮ. ಈ ಕಾರ್ಯಕ್ರಮ ಅಶಕ್ತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿತ್ತು. ಈ ಯೋಜನೆಯನ್ನು ಕೊಲ್ಲುತ್ತಿರುವ ನೀವು ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಯಡಿಯೂರಪ್ಪನವರೇ ಎಂದು  ಬಿಎಸ್‌ವೈ ವಿರುದ್ಧ ಹೆಚ್‌ಡಿಕೆ ಆಕ್ರೋಶದ ಮಾತುಗಳನ್ನಾಡಿದ್ದಾರೆ.

ಚೈತನ್ಯ ತುಂಬಿ ಇಲ್ಲವೇ ಹೋರಾಟ ಎದುರಿಸಿ:
'ಬಡವರ ಬಂಧು' ಯೋಜನೆಯಲ್ಲಿ ಯಾವುದೇ ಜಾತಿ, ಧರ್ಮ, ಪಕ್ಷಗಳಿಲ್ಲ ಎಂದು ಬಣ್ಣಿಸಿರುವ ಕುಮಾರಸ್ವಾಮಿ, ಈ ಯೋಜನೆ ವಿಫಲವಾಗಬಾರದು.  ಇದು ಅಶಕ್ತರನ್ನು ಸಬಲರನ್ನಾಗಿಸಿ ದೇಶದ ಅಭಿವೃದ್ಧಿಯಲ್ಲಿ ಅವರನ್ನೂ ಒಳಗೊಳ್ಳುವಂತೆ ಮಾಡುವ ಪ್ರಮುಖ ಅರ್ಥಿಕ ಚಟುವಟಿಕೆ‌ ಎಂದು ಬಣ್ಣಿಸಿರುವ ಅವರು ಈ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರು ಚೈತನ್ಯ ತುಂಬಬೇಕು. ಇಲ್ಲವೇ, ಹೋರಾಟ ಎದುರಿಸಬೇಕು ಎಂಬ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.
 

More Stories

Trending News