ಕರ್ನಾಟಕದ ಎರಡು ಲೋಕಸಭಾ ಕ್ಷೇತ್ರಗಳಿಗೆ ಬಿಎಸ್​ಪಿ ಅಭ್ಯರ್ಥಿಗಳು ಅಂತಿಮ

2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಬಿಎಸ್​ಪಿ ತಿಳಿಸಿದೆ.

Last Updated : Mar 20, 2019, 11:33 AM IST
ಕರ್ನಾಟಕದ ಎರಡು ಲೋಕಸಭಾ ಕ್ಷೇತ್ರಗಳಿಗೆ ಬಿಎಸ್​ಪಿ ಅಭ್ಯರ್ಥಿಗಳು ಅಂತಿಮ title=
File Image

ಬೆಂಗಳೂರು: 2019ರ ಲೋಕಸಭಾ ಚುನಾವಣೆಗಾಗಿ ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ) ಕರ್ನಾಟಕದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ತಿಳಿಸಿರುವ ಬಿಎಸ್​ಪಿ, ಮಂಗಳವಾರ ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಕರ್ನಾಟಕದ ಬಿಎಸ್​ಪಿ ರಾಜ್ಯಾಧ್ಯಕ್ಷ ಪ್ರೊ. ಹರಿರಾಮ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಚಾಮರಾಜನಗರ(ಎಸ್ಸಿ) ಕ್ಷೇತ್ರದಿಂದ ಡಾ.ಶಿವಕುಮಾರ್ ಹಾಗೂ  ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ.ಸಿ.ಎಸ್. ದ್ವಾರಕಾನಾಥ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 

Trending News