ಮೈಸೂರು: ಬಹುಜನ ಸಮಾಜ ಪಕ್ಷ (ಬಿಎಸ್​ಪಿ) ನಾಯಕ ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಮಹೇಶ್ ಸಮ್ಮಿಶ್ರ ಸರ್ಕಾರದ ಮೈತ್ರಿಯಿಂದ ಪಕ್ಷ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಶಾಸಕ ಎನ್. ಮಹೇಶ್, "ನನಗೆ ಬೆಂಬಲ ಹಿಂತೆಗೆದುಕೊಳ್ಳುವ ಯೋಜನೆ ಇದ್ದಿದ್ದರೆ ನಾನು ಮೈಸೂರಿನಲ್ಲಿರುತ್ತಿರಲಿಲ್ಲ, ದೆಹಲಿ ಅಥವಾ ಮುಂಬೈನಲ್ಲಿರುತ್ತಿದ್ದೆ ಎಂದು ಹೇಳಿದರು.


ಇದೇ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಮಹೇಶ್, ಬಿಎಸ್​ಪಿ ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.