ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿಎಸ್ಪಿ ಪಕ್ಷದ ಎನ್.ಮಹೇಶ್

ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್ಪಿ ಪಕ್ಷದ ಏಕೈಕ ಶಾಸಕ ಮತ್ತು ಸಚಿವರಾಗಿದ್ದ ಎನ್ ಮಹೇಶ್ ಅವರು ಈಗ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

Updated: Oct 11, 2018 , 06:26 PM IST
ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿಎಸ್ಪಿ ಪಕ್ಷದ ಎನ್.ಮಹೇಶ್

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್ಪಿ ಪಕ್ಷದ ಏಕೈಕ ಶಾಸಕ ಮತ್ತು ಸಚಿವರಾಗಿದ್ದ ಎನ್ ಮಹೇಶ್ ಅವರು ಈಗ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಎಸ್ಪಿ ಪಕ್ಷವನ್ನು  ಕಟ್ಟುವ ಅವಶ್ಯಕತೆ ಇದೆ ಹೀಗಾಗಿ ಕುಮಾರಸ್ವಾಮಿ ಅವರಿಗೆ ಧನ್ಯವಾದ ಹೇಳಿ ರಾಜಿನಾಮೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ.

ಇನ್ನು ಮುಂದುವರೆದು " ಗೆದ್ದ ನಂತರ ಬೆಂಗಳೂರಿಗೆ  ಹೋದ್ರು ಎಂದು ಕ್ಷೇತ್ರದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಅಲ್ಲದೆ ಮಂತ್ರಿಯಾದಾಗಿನಿಂದ ನಮ್ಮ ಪಕ್ಷದ ಚಟುವಟಿಕೆ ಸ್ಥಗೀತಗೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಇನ್ಮುಂದೆ ಪಕ್ಷದ ಚಟುವಟಿಕೆ ಮತ್ತು ಕ್ಷೇತ್ರದ ಕಾರ್ಯ ಚಟುವಟಿಕೆಗಳಲ್ಲಿ ಭಾಗಿಯಾಗುವುದಾಗಿ " ಎಂದು ಎನ್ ಮಹೇಶ್ ತಿಳಿಸಿದ್ದಾರೆ.