ಕರ್ನಾಟಕದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧೆ: ಎನ್.ಮಹೇಶ್
ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದ್ದಾರೆ.
ಮೈಸೂರು: ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಬಹುಜನ ಸಮಾಜ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ನಡೆದ ವಿಭಾಗ ಮಟ್ಟದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಕನಿಷ್ಠ ಎರಡು ಕ್ಷೇತ್ರಗಳಲ್ಲಾದರೂ ಬಿಎಸ್ಪಿ ಜಯಗಳಿಸುವ ವಿಶ್ವಾಸವಿದೆ. ಅದಕ್ಕಾಗಿ ರಾಜ್ಯದಲ್ಲಿ ಬಿಎಸ್ಪಿ ವರಿಷ್ಠೆ ಮಾಯಾವತಿ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಅವರು ಹೇಳಿದರು.
ಚಿಕ್ಕಬಳ್ಳಾಪುರದಲ್ಲಿ ಸಿ.ಎಸ್.ದ್ವಾರಕಾನಾಥ್ ಸ್ಪರ್ಧೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸಿ.ಎಸ್.ದ್ವಾರಕಾನಾಥ್ ಅವರು ಸ್ಪರ್ಧಿಸಲಿದ್ದು, ಪಕ್ಷದ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಬೇಕು. ಬಹುಜನ ಸಮಾಜ ಪಕ್ಷ ಕೇವಲ ಒಂದು ರಾಜಕೀಯ ಪಕ್ಷ ಅಲ್ಲ, ಶೋಷಿತರ ಪರವಾದ ಚಳವಳಿ ಎಂಬುದನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಎನ್.ಮಹೇಶ್ ಹೇಳಿದರು.