ಬೆಂಗಳೂರು : ಇಂದಿರಾ ಕ್ಯಾಂಟೀನ್‌ನಲ್ಲಿ ನೀಡುತ್ತಿದ್ದ ತಿಂಡಿ, ಊಟ ನಿಲ್ಲಿಸಿರುವ ವಿಷಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yeddyurappa)  ದೂರವಾಣಿ ಮೂಲಕ ಮಾತುಕತೆ ನಡೆಸಿ ಸ್ಪಷ್ಟೀಕರಣ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಬಡ ಜನರಿಗೆ ಕೈಗೆಟುಕುವ ದರದಲ್ಲಿ ಊಟ, ತಿಂಡಿ ಒದಗಿಸುತ್ತಿದ್ದ ಇಂದಿರಾ ಕ್ಯಾಂಟೀನ್‌ನಲ್ಲಿ ದರ ಏರಿಕೆ ಮಾಡಿರುವ ಕುರಿತು ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಇಂದು ಕರೆ ಮಾಡಿದ್ದ ಯಡಿಯೂರಪ್ಪ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ, ತಿಂಡಿ ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ದುರುಪಯೋಗವಾದ ಕಾರಣ ದರ ನಿಗದಿ ಮಾಡಿರುವುದಾಗಿ ತಿಳಿಸಿದರು. 


ಲಾಕ್‌ಡೌನ್‌ನಿಂದ ರೈತರಿಗೆ ಆಗುತ್ತಿರುವ ಕಷ್ಟಗಳ ಬಗ್ಗೆ ಕಡೆಗೂ ಕಣ್ಣುಬಿಟ್ಟ ರಾಜ್ಯ ಸರ್ಕಾರ


ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ದುರುಪಯೋಗವಾಗದಂತೆ ಇಂದಿರಾ ಕ್ಯಾಂಟೀನ್ (Indira Canteen) ಮೂಲಕ ಬಡವರಿಗೆ  ಊಟ, ತಿಂಡಿಯನ್ನು ಉಚಿತವಾಗಿ ನೀಡಿ. ದುರುಪಯೋಗಕ್ಕೆ ಅವಕಾಶ ಮಾಡಿಕೊಡುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಎಂದು ಹೇಳಿದರು. ಇದಕ್ಕೆ ಮನ್ನಣೆ ನೀಡಿದ ಸಿಎಂ ಯಡಿಯೂರಪ್ಪ ಈ ಕುರಿತು ಪರಿಶೀಲನೆ ನೀಡುವಂತೆ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.


ಲಾಕ್‌ಡೌನ್‌ನಿಂದ ರೈತರು, ಕೃಷಿ ಕೂಲಿ ಕಾರ್ಮಿಕರು, ಜತೆಗೆ ಹಲವಾರು ಕ್ಷೇತ್ರಗಳ ದುಡಿಯುವ ವರ್ಗದವರಿಗೆ ತೊಂದರೆಯಾಗಿದೆ. ಅವರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಅವರು ಒತ್ತಾಯಿಸಿದರು. ಇದಕ್ಕೂ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಯಡಿಯೊರಪ್ಪ ಪ್ರತಿಪಕ್ಷಗಳ ಸಲಹೆ, ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು  ಕಾರ್ಯಕ್ರಮ ರೂಪಿಸುವುದಾಗಿ ಭರವಸೆ ನೀಡಿದರು ಎನ್ನಲಾಗಿದೆ.