ರೈತರಿಗಾಗಿ ಏನಾದರೂ ಮಾಡಬೇಕೆಂಬ ತುಡಿತ ಬಿಎಸ್‌ವೈ ಅವರಲ್ಲಿದೆ!

ರೈತರಿಗಾಗಿ ಏನಾದರೂ ಮಾಡಬೇಕೆಂಬ ತುಡಿತ ಯಡಿಯೂರಪ್ಪ ಅವರಲ್ಲಿದೆ. ಹಾಗಾಗಿ ಅಧಿಕಾರಕ್ಕೆ ಬಂದ ಬಳಿಕ ರೈತರಿಗೆ ಒಳ್ಳೆಯದು ಮಾಡುವ, ರಾಜ್ಯದ ಜನತೆಗೆ ಒಳ್ಳೆಯದು ಮಾಡುವ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Last Updated : Jul 26, 2019, 12:24 PM IST
ರೈತರಿಗಾಗಿ ಏನಾದರೂ ಮಾಡಬೇಕೆಂಬ ತುಡಿತ ಬಿಎಸ್‌ವೈ ಅವರಲ್ಲಿದೆ! title=

ಬೆಂಗಳೂರು:  ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಂಸದೆ ಸೋಭಾ ಕರಂದ್ಲಾಜೆ ಅವರು, ಯಡಿಯೂರಪ್ಪ ಅವರಿಗೆ ರೈತರಿಗೆ ಏನಾದರೂ ಒಳಿತು ಮಾಡಬೇಕು ಎಂಬ ತುಡಿತ ಇದೆ. ಹಾಗಾಗಿ ರೈತರಿಗೆ ಆದ್ಯತೆ ನೀಡಿ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಹೋರಾಟಗಾರರು. ಅವರು 4 ಬಾರಿ ಸಿಎಂ ಆಗಿದ್ದಾರೆ ಎನ್ನುವುದಕ್ಕಿಂತ ಹೆಚ್ಚಾಗಿ ರೈತ ಹೋರಾಟಗಾರರು. ರೈತರಿಗಾಗಿ ಏನಾದರೂ ಮಾಡಬೇಕೆಂಬ ತುಡಿತ ಅವರಲ್ಲಿದೆ. ಹಾಗಾಗಿ ಅಧಿಕಾರಕ್ಕೆ ಬಂದ ಬಳಿಕ ರೈತರಿಗೆ ಒಳ್ಳೆಯದು ಮಾಡುವ, ರಾಜ್ಯದ ಜನತೆಗೆ ಒಳ್ಳೆಯದು ಮಾಡುವ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಪಟ್ಟ ಅನ್ನೋದು ಮುಳ್ಳಿನ ಹಾಸಿಗೆ ಇದ್ದಂತೆ. ಹೈಕಮ್ಯಾಂಡ್ ಮತ್ತು ಅಮಿತ್ ಷಾ ಅವರ ಮಾರ್ಗದರ್ಶನದಲ್ಲಿ ಯಡಿಯೂರಪ್ಪ ಕೆಲಸ ಮಾಡಲಿದ್ದಾರೆ. ಈಗಾಗಲೇ ಯಡಿಯೂರಪ್ಪ ಅವರಿಗೆ ಅನುಭವವಿದೆ. ನಮ್ಮೆಲ್ಲಾ ಶಾಸಕರೂ ರಾಜ್ಯದ ಅಭಿವೃದ್ಧಿಗಾಗಿ ಯಡಿಯೂರಪ್ಪ ಅವರ ಜೊತೆಗಿರಲಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದರೆ ರಾಜ್ಯದ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಆಗಲಿದೆ ಎಂಬ ವಿಶ್ವಾಸ, ಭರವಸೆ ನಮಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಅತೃಪ್ತ ಶಾಸಕರ ಬಗ್ಗೆ ಪ್ರತಿಕ್ರಿಯಿಸಿದ ಶೋಭಾ ಅವರು, ರಾಜೀನಾಮೆ ನೀಡಿ ಮುಂಬೈನಲ್ಲಿ ಇರುವ ಶಾಸಕರು ಮೈತ್ರಿ ನಾಯಕರಾದ ಕುಮಾರಸ್ವಾಮಿ ಮತ್ತು ಸಿದ್ದರಮಯ್ಯ ಅವರ ನಡೆಯಿಂದ ಬೇಸತ್ತು ಹೋಗಿದ್ದಾರೆ. ಮೂರು ಶಾಸಕರು ಅನರ್ಹ ಗೊಂಡಿರುವುದನ್ನು ಹೊರತುಪಡಿಸಿ ಉಳಿದೆಲ್ಲಾ ಶಾಸಕರೂ ಇನ್ನೂ ಅವರವರ ಕಾಂಗ್ರೆಸ್- ಜೆಡಿಎಸ್ ಪಕ್ಷಗಳ ಸದಸ್ಯರಾಗಿಯೇ ಇದ್ದಾರೆ. ಅವರು ಮುಂದಿನ ದಿನಗಳಲ್ಲಿ ಬಿಜೆಪಿಗೆ ಬರುತ್ತಾರೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ  ಎಂದಿದ್ದಾರೆ.

Trending News