ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್‌ ಇಲ್ಲವೆಂದ ಬಿಎಸ್‌ವೈ ..!

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಹಲವಾರು ಟಿಕೆಟ್‌ ಆಕಾಂಕ್ಷಿಗಳು ಹರಸಾಹಸ ಪಡುತ್ತಿದ್ದಾರೆ. . ಇದೇ ವೇಳೆ, ಮಂಗಳವಾರ ಹೇಳಿಕೆ ನೀಡಿರುವ ಮಾಜಿ ಸಿಂಎ ಬಿ ಎಸ್ ಯಡಿಯೂರಪ್ಪ, 'ನಾಲ್ಕರಿಂದ ಆರು ಬಿಜೆಪಿ ಶಾಸಕರು ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಅನ್ನು ಕಳೆದುಕೊಳ್ಳಲಿದ್ದಾರೆ' ಎಂದು ತಿಳಿಸಿದ್ದಾರೆ. 

Written by - Zee Kannada News Desk | Last Updated : Mar 7, 2023, 05:15 PM IST
  • 'ಈಗಿರುವ ನಾಲ್ಕರಿಂದ ಆರು ಹಾಲಿ ಶಾಸಕರಿಗೆ ಟಿಕೆಟ್‌ ಸಿಗುವುದಿಲ್ಲ
  • 'ಕಾಂಗ್ರೆಸ್‌ನ ನಾಯಕ ಯಾರು? ರಾಹುಲ್ ಗಾಂಧಿ ಏಕೆ ಬಂದಿಲ್ಲ' ಎಂದು ಪ್ರಶ್ನಿಸಿದರು.
  • ಸಿದ್ದರಾಮಯ್ಯ, ಡಿಕೆಶಿ ವಿರುದ್ಧವೂ ವಾಗ್ದಾಳಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದರು.
ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್‌ ಇಲ್ಲವೆಂದ ಬಿಎಸ್‌ವೈ ..!  title=

B. S. Yediyurappa: ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಸುದ್ದಿಗೋಷ್ಠಿ ಕಲಬುರಗಿಯಲ್ಲಿ ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 'ಈಗಿರುವ ನಾಲ್ಕರಿಂದ ಆರು ಹಾಲಿ ಶಾಸಕರಿಗೆ ಟಿಕೆಟ್‌ ಸಿಗುವುದಿಲ್ಲ. ಉಳಿದಂತೆ ಬಹುತೇಕ ಶಾಸಕರಿಗೆ ಟಿಕೆಟ್‌ ದೊರೆಯಲಿದೆ' ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ನಾವು ಮೊದಲು ಸ್ಪಷ್ಟ ಬಹುಮತ ಪಡೆಯಬೇಕಿದೆ. ಆ ನಂತರ ಪಕ್ಷದ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ನಿರ್ಧರಿಸುತ್ತೇವೆ' ಎಂದು ಯಡಿಯೂರಪ್ಪ ಹೇಳಿದರು.

ಕರ್ನಾಟಕದಲ್ಲಿಯೂ ಗುಜರಾತ್‌ ಮಾಡೆಲ್‌? ಗುಜರಾತ್‌ನಲ್ಲಿ ಹಲವು ಬಾರಿ ಆಯ್ಕೆಯಾಗಿರುವ ಬಿಜೆಪಿಯ ಹಿರಿಯ ಶಾಸಕರಿಗೆ ಟಿಕೆಟ್‌ ಕೈತಪ್ಪುವ ಸಾಧ್ಯತೆ ಇದೆ. ಇಂತಹ ಹಿರಿಯ ಶಾಸಕರಲ್ಲಿ ಶಿವಮೊಗ್ಗ ಶಾಸಕ ಕೆಎಸ್‌ ಈಶ್ವರಪ್ಪ ಒಬ್ಬರು. ಇನ್ನುಳಿದಂತೆ, ವಿವಾದಿತ ಹೇಳಿಕೆ ನೀಡುವ ಮೂಲಕ ಅಪಖ್ಯಾತಿಗೆ ಗುರಿಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳರಿಗೆ ಟಿಕೆಟ್‌ ಕೈತಪ್ಪುವ ಸಾಧ್ಯತೆಗಳಿವೆ ಎಂಬ ಮಾತುಗಳು ಮುನ್ನೆಲೆಗೆ ಬಂದಿವೆ.

ಇದನ್ನೂ ಓದಿ-Viral Video: ಅಯ್ಯೋ ದುರ್ವಿಧಿಯೇ…! ಮಿತಿಮೀರಿದ ಡಿಜೆ ಸೌಂಡ್’ಗೆ ಎದೆಒಡೆದು ಮಂಟಪದಲ್ಲಿಯೇ ಪ್ರಾಣಬಿಟ್ಟ ವರ

ರಾಹುಲ್ ಗಾಂಧಿ ಏಕೆ ಬಂದಿಲ್ಲ ಎಂದು ಬಿಎಸ್‌ವೈ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಬಿಜೆಪಿ ಆಹ್ವಾನಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಇದಕ್ಕೆ ಪ್ರತಿಕ್ರಿಯಿಸಿದ ಅವರು, 'ಕಾಂಗ್ರೆಸ್‌ನ ನಾಯಕ ಯಾರು? ರಾಹುಲ್ ಗಾಂಧಿ ಏಕೆ ಬಂದಿಲ್ಲ' ಎಂದು ಪ್ರಶ್ನಿಸಿದರು. ರಾಹುಲ್ ಗಾಂಧಿ ವಿದೇಶಗಳಲ್ಲಿ ಭಾರತದ ಬಗ್ಗೆ ತುಂಬಾ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಹೇಳಿದರು.

ಸಿದ್ದರಾಮಯ್ಯ, ಡಿಕೆಶಿ ವಿರುದ್ಧವೂ ವಾಗ್ದಾಳಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದರು. 'ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೂ ಮುನ್ನ ತಾವೇ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ನಮ್ಮ ಪಕ್ಷವು ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರದ್ದು ಕೇವಲ ಭಿಕ್ಷುಕನ ಕನಸು' ಎಂದು ಬಿಎಸ್‌ ಯಡಿಯೂರಪ್ಪ ಟೀಕಿಸಿದರು.

ಇದನ್ನೂ ಓದಿ-Viral Video : ಮೆಟ್ರೋದಲ್ಲಿ ಇದೆಲ್ಲಾ ಮಾಡ್ತಾರಾ? ಯುವತಿಯರ ಹುಚ್ಚಾಟ.. ನೆತ್ತಿಗೇರಿತು ಜನರ ಕೋಪ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News