ಆರೋಗ್ಯ-ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನ ಘೋಷಣೆಗಳು ಕ್ರಾಂತಿಕಾರಿ ಹೆಜ್ಜೆಯಾಗಿವೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Karnataka Budget 2025: ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನ ಆಗಿವೆ. ಬಜೆಟ್ನಲ್ಲಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಕೊಟ್ಟಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ವೇತನ ಹೆಚ್ಚಿಸಿದ್ದಾರೆ.

Written by - Manjunath Hosahalli | Last Updated : Mar 7, 2025, 05:00 PM IST
    • ಆರೋಗ್ಯ ಶಿಕ್ಷಣಕ್ಕೆ ಸಿದ್ದರಾಮಯ್ಯ ಅವರು ಬಜೆಟ್ ಹೆಚ್ಚು ಒತ್ತು ನೀಡಿದ್ದಾರೆ
    • ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನ ಆಗಿವೆ
    • ಬಜೆಟ್ ಮಂಡನೆ ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ
ಆರೋಗ್ಯ-ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನ ಘೋಷಣೆಗಳು ಕ್ರಾಂತಿಕಾರಿ ಹೆಜ್ಜೆಯಾಗಿವೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Dinesh Gundurao

Karnataka Budget 2025: ಸಾಮಾಜಿಕ ನ್ಯಾಯದ ಜೊತೆಗೆ ಆರೋಗ್ಯ ಶಿಕ್ಷಣಕ್ಕೆ ಸಿದ್ದರಾಮಯ್ಯ ಅವರು ಬಜೆಟ್ ಹೆಚ್ಚು ಒತ್ತು ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಕ್ರಾಂತಿಕಾರಿ ಹೆಜ್ಜೆಗಳನ್ನ ಇಡಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Add Zee News as a Preferred Source

ಇದನ್ನೂ ಓದಿ:  ಪೋಸ್ಟ್ ಆಫೀಸ್ RD ಖಾತೆಯಲ್ಲಿ ಪ್ರತಿ ತಿಂಗಳು ₹2400 ಠೇವಣಿ ಇಟ್ರೆ 60 ತಿಂಗಳ ನಂತರ ಎಷ್ಟು ಹಣ ಸಿಗುತ್ತದೆ?

ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನ ಆಗಿವೆ. ಬಜೆಟ್ನಲ್ಲಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಕೊಟ್ಟಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ವೇತನ ಹೆಚ್ಚಿಸಿದ್ದಾರೆ. ಅರ್ಚಕರ ವೇತನ ಕೂಡ ವಾರ್ಷಿಕ 62 ಸಾವಿರಕ್ಕೆ ಹೆಚ್ಚಿಸಲಾಗಿದೆ. ಆಡಳಿತಾತ್ಮಕ ಸುಧಾರಣೆ, ಹಣಕಾಸಿನ ಸುವ್ಯವಸ್ಥೆ ಬಜೆಟ್ ನಲ್ಲಿ ಎದ್ದು ಕಾಣುತ್ತಿದೆ. ಹಲಾಲ್ ಬಜೆಟ್ ಎನ್ನುವ ಬಿಜೆಪಿಗರಿಗೆ ಬೇರೆ ಏನೂ ಕಾಣಿಸುತ್ತಿಲ್ಲ.. ವಿರೋದ ಪಕ್ಷಕ್ಕೆ ಮಾತಾಡಲು ಬೇರೆ ವಿಷಯ ಇಲ್ಲ. ಹೀಗಾಗಿ ಜನರ ದಾರಿ ತಪ್ಪಿಸುವ ಹೇಳಿಕೆ ಕೊಡ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆರೋಗ್ಯ ಇಲಾಖೆಗೆ ಕ್ರಾಂತಿಕಾರಿ ಬಜೆಟ್ ಇದಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ 100 ಕೋಟಿ ಅನುದಾನದಲ್ಲಿ ಗೃಹ ಆರೋಗ್ಯ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸುವ ಘೋಷಣೆ ಮಾಡಲಾಗಿದೆ. ತಾಯಿ‌ ಮಗುವಿನ ಮರಣ ಪ್ರಮಾಣವನ್ನ ಶೂನ್ಯಕ್ಕಿಳಿಸಲು 320 ಕೋಟಿ ಅನುದಾನ ಯೋಜನೆ ಘೋಷಿಸಿದ್ದಾರೆ. 108 ಅಂಬ್ಯುಲೆನ್ಸ್ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದಲೇ ವ್ಯವಸ್ಥೆ ಜಾರಿಗೊಳಿಸಲು 'ಆರೋಗ್ಯ ಕವಚ' ಬಲಪಡಿಸುವ ಯೋಜನೆ ಘೋಷಿಸಲಾಗಿದೆ. ರಾಜ್ಯದ 3 ಲಕ್ಷ ನೌಕರರಿಗೆ 5 ಲಕ್ಷದ ವರೆಗೆ ನಗದು ರಹಿತ ಚಿಕಿತ್ಸೆ ಒದಗಿಸುವ ಯೋಜನೆ ಘೋಷಿಸಿಲಾಗಿದೆ. ಆಶಾ ಕಾರ್ಯಕರ್ತರಿಗೆ 1000 ಸಾವಿರ ವೇತನ ಹೆಚ್ಚಿಸುವ ಘೋಷಣೆಯಾಗಿದೆ. ಸಾಂಕ್ರಾಮಿಕ ರೋಗಗಳ ತಡೆಗೆ 50 ಕೋಟಿಯಲ್ಲಿ ವಿಶೇಷ ಅಭಿಯಾನ ಕಾರ್ಯಕ್ರಮವನ್ನ ನೀಡಿದ್ದಾರೆ. ಕಂದಾಯ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯಲ್ಲಿ ಪಾರದರ್ಶಕತೆ ವರ್ಗಾವಣೆ ಆಡಳಿತವನ್ನ ತರಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನೂ ಓದಿ:  ಪಿಎಫ್ ಸದಸ್ಯರಿಗೆ 7 ರೀತಿಯ ಇಪಿಎಸ್ ಪಿಂಚಣಿ !ನೀವು ಮಾತ್ರವಲ್ಲ ನಿಮ್ಮ ಕುಟುಂಬಕ್ಕೂ ಸಂಪೂರ್ಣ ರಕ್ಷಣೆ !

ಇದು ರಾಜ್ಯದ ಹಿತ ಕಾಪಾಡುವ ಬಜೆಟ್‌ ಆಗಿದೆ. ವಿರೋಧ ಪಕ್ಷವಾಗಿ ಬಿಜೆಪಿಗೆ ಏನು ಹೇಳಬೇಕು ಎಂದು ಗೊತ್ತಾಗುತ್ತಿಲ್ಲ.‌ ಜಿಎಸ್ ಟಿಯಲ್ಲಿ ದೇಶದಲ್ಲಿ 2 ನೇ ಸ್ಥಾನದಲ್ಲಿ ಕರ್ನಾಟಕ ಇದೆ. ಆದರೆ ರಾಜ್ಯಕ್ಕೆ ಕೇಂದ್ರದಿಂದ ತೆರಿಗೆ ಪಾಲಿನಲ್ಲಿ ಅನ್ಯಾಯ ಆಗುತ್ತಿದ್ರೂ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವಿರುದ್ಧ  ಬಾಯಿ ಬಿಟ್ಟು ಏನನ್ನು ಹೇಳಲಾಗದೆ ಸಿಎಂ ಸಿದ್ದರಾಮಯ್ಯ ಅವರ ಉತ್ತಮ ಕೆಲಸಗಳನ್ನು ಟೀಕಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News