Budget Session 2023: ಜುಲೈ 3ರಿಂದ 14ರವರೆಗೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ

ಜುಲೈ 7-14ರವರೆಗೆ ವಿಧಾನಸೌಧದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಈ ಹಿನ್ನಲೆ ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ಗಂಟೆಯವರೆಗೆ ವಿಧಾನಸೌಧದ ಸುತ್ತಮುತ್ತ 2KM ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

Written by - Puttaraj K Alur | Last Updated : Jul 1, 2023, 09:48 PM IST
  • ನೂತನ ಕಾಂಗ್ರೆಸ್ ಸರ್ಕಾರದ ಮೊದಲ ವಿಧಾನಮಂಡಲದ ಬಜೆಟ್ ಅಧಿವೇಶನ ಜುಲೈ 3-14ರವರೆಗೆ ನಡೆಯಲಿದೆ
  • ವಿಧಾನಸೌಧದ ಸುತ್ತಮುತ್ತಲಿನ 2KM ವ್ಯಾಪ್ತಿಯ ಪ್ರದೇಶಗಳಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
  • ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
Budget Session 2023: ಜುಲೈ 3ರಿಂದ 14ರವರೆಗೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ title=
ಜುಲೈ 3-14ರವರೆಗೆ ನಿಷೇಧಾಜ್ಞೆ ಜಾರಿ

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ವಿಧಾನಮಂಡಲದ ಬಜೆಟ್ ಅಧಿವೇಶನವು ಜುಲೈ 3ರಿಂದ 14ರವರೆಗೆ ನಡೆಯಲಿದ್ದು, ಮುಂಜಾಗೃತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತಲಿನ 2KM ವ್ಯಾಪ್ತಿಯ ಪ್ರದೇಶಗಳಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಬಗ್ಗೆ ಶನಿವಾರ ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ‘ಜುಲೈ 7 ರಿಂದ 14ರವರೆಗೆ ವಿಧಾನಸೌಧದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಈ ಹಿನ್ನಲೆ ಪ್ರತಿ ದಿನ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ಗಂಟೆಯವರೆಗೆ ವಿಧಾನಸೌಧದ ಸುತ್ತಮುತ್ತ 2KM ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ’ ಎಂದು ತಿಳಿಸಿದ್ದಾರೆ.  

ಇದನ್ನೂ ಓದಿ: Viral Video: ಸಿಗರೇಟು ಸೇದುವುದರಲ್ಲಿ ಹೆಣ್ಮಕ್ಳೆ ಸ್ಟ್ರಾಂಗು ಗುರು; ಈ ಪಟ್ಟಣಕ್ಕೆ ಏನಾಗಿದೆ ಎಂದ ನೆಟ್ಟಿಗರು!

ಈ ಅವಧಿಯಲ್ಲಿ ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚಿನ ಜನರು ಗುಂಪು ಸೇರಬಾರದು. ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಸಭೆಯನ್ನು ನಡೆಸಬಾರದು. ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಚಾಕು ಹಾಗೂ ಇತರ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಓಡಾಡುವಂತಿಲ್ಲ.  

ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ  ದಹನ, ಭಿತ್ತಿಪತ್ರ ಪ್ರದರ್ಶನ ಮಾಡಬಾರದು. ಪ್ರಚೋದಿಸುವ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳು ಸೇರಿದಂತೆ ಇತರೆ ಯಾವುದೇ ವಸ್ತುಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಜ್ಯೋತಿಷಿಯ ಶವ ಪತ್ತೆ: 30 ಲಕ್ಷ ರೂ. ನಗದು, ಅಪಾರ ಪ್ರಮಾಣದ ನಾಣ್ಯಗಳು ಪತ್ತೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News