10 ನೇ ತರಗತಿ ಪಾಸ್‌ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ, ವೇತನ 47000 ರೂ.

KSP Constable Recruitment 2022: ಕರ್ನಾಟಕ ರಾಜ್ಯ ಪೊಲೀಸ್‌ನಲ್ಲಿ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 3,484 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Written by - Ranjitha R K | Last Updated : Sep 28, 2022, 11:22 AM IST
  • ಪೋಲೀಸ್ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ
  • ಕರ್ನಾಟಕ ರಾಜ್ಯ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕ
10 ನೇ ತರಗತಿ ಪಾಸ್‌ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ, ವೇತನ 47000 ರೂ. title=
KSP Constable Recruitment 2022 (file photo)

KSP Constable Recruitment 2022 : 10ನೇ ತರಗತಿ ಉತ್ತೀರ್ಣರಾದವರಿಗೆ ಪೋಲೀಸ್ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶವಿದೆ.  ಕರ್ನಾಟಕ ರಾಜ್ಯ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ವೆಬ್‌ಸೈಟ್ ksp.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ. 

ಕರ್ನಾಟಕ ಪೊಲೀಸ್‌ನ 3484 ಹುದ್ದೆಗಳಿಗೆ ನೇಮಕಾತಿ :
ಕರ್ನಾಟಕ ರಾಜ್ಯ ಪೊಲೀಸ್‌ನಲ್ಲಿ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 3484 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪೊಲೀಸ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ KSP Constable Recruitment 2022 Notification PDF 1 ಮತ್ತು KSP Constable Recruitment 2022 Notification PDF 2  ಮೂಲಕ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ : ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ವಿರುದ್ಧ Pay Mayor ಅಭಿಯಾನ..!

ಅರ್ಜಿ ಸಲ್ಲಿಸಲು ಅಕ್ಟೋಬರ್ 31  ಕೊನೆಯ ದಿನ : 
ಕರ್ನಾಟಕ ರಾಜ್ಯ ಪೊಲೀಸ್ ನಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 19 ಸೆಪ್ಟೆಂಬರ್ 2022 ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 31 2022 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿಗೆ ಅರ್ಹತೆ :
ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ/10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ, ಅವರ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿರಬಾರದು ಮತ್ತು 25 ವರ್ಷಕ್ಕಿಂತ ಹೆಚ್ಚಿರಬಾರದು. SC, ST, OBC (2A, 2B, 3A, 3B) ಗರಿಷ್ಠ ವಯಸ್ಸಿನ ಮಿತಿಯನ್ನು 27 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಆದರೆ ಕರ್ನಾಟಕದ ಬುಡಕಟ್ಟು ಜನಾಂಗದವರಿಗೆ ಗರಿಷ್ಠ ವಯೋಮಿತಿ 30 ವರ್ಷಗಳು.

ಇದನ್ನೂ ಓದಿ : ಪಿಎಫ್ಐ ನಿಷೇಧ: ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಸಚಿವ ನಿರಾಣಿ

ಕಾನ್ಸ್‌ಟೇಬಲ್ ಹುದ್ದೆಗಳಿಗೆ ವೇತನ ಎಷ್ಟು ? : 
ಕರ್ನಾಟಕ ರಾಜ್ಯ ಪೊಲೀಸ್‌ನಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ  47,650 ರೂ.ವರೆಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ವೇತನ ಶ್ರೇಣಿಯನ್ನು ರೂ. 23500-550-24600-600-27000-650-29600-750-32600-850-36000-950-39800-1100-464040-1250 ಎಂದು ನಿಗದಿಪಡಿಸಲಾಗಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News