ಜಾತಿ ಗಣತಿ ವರದಿ ಒಪ್ಪಿಕೊಳ್ಳದ ಬಿಜೆಪಿ ನಾಯಕರಿಂದ ಕುಂಟುನೆಪ: ಸಿದ್ದರಾಮಯ್ಯ

ಸೋರಿಕೆ ಆಗಿದೆ ಎನ್ನಲಾದ ಜಾತಿಗಣತಿ ವರದಿಯ ಅಂಶಗಳೇ ಮೂಲ ವರದಿಯಲ್ಲಿ ಇವೆ ಎನ್ನುವುನ್ನು ಬಿಜೆಪಿ ನಾಯಕರು ಅಷ್ಟೊಂದು ವಿಶ್ವಾಸದಿಂದ ಹೇಗೆ ಹೇಳಲು ಸಾಧ್ಯವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Zee Kannada News Desk | Last Updated : Aug 29, 2021, 05:20 PM IST
  • ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರದ ಅವಧಿಯಲ್ಲಿಯೇ ಪೂರ್ಣಗೊಳಿಸಿ ಸ್ವೀಕರಿಸಬೇಕೆಂಬುದು ನನ್ನ ಉದ್ದೇಶವಾಗಿತ್ತು
  • ಅಂಕಿಅಂಶಗಳ ಮಾಹಿತಿ ಸಂಗ್ರಹವಾಗಿದ್ದರೂ ವಿಶ್ಲೇಷಣೆಯ ಕೆಲಸ ಪೂರ್ಣಗೊಂಡಿರದ ಕಾರಣ ಸಾಧ್ಯವಾಗಿರಲಿಲ್ಲ ಎಂದ ಸಿದ್ದರಾಮಯ್ಯ
  • ಜಾತಿ ಗಣತಿ ವರದಿ ಸೋರಿಕೆ ಬಗ್ಗೆ ಖಚಿತ ಮಾಹಿತಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಳಿ ಇದ್ದರೆ ಅದರ ಬಗ್ಗೆ ತನಿಖೆ ನಡೆಸಲಿ
ಜಾತಿ ಗಣತಿ ವರದಿ ಒಪ್ಪಿಕೊಳ್ಳದ ಬಿಜೆಪಿ ನಾಯಕರಿಂದ ಕುಂಟುನೆಪ: ಸಿದ್ದರಾಮಯ್ಯ title=
ಬಿಜೆಪಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ (Photo Courtesy: @Zee News)

ಬೆಂಗಳೂರು: ಜಾತಿ ಗಣತಿ ವರದಿ(Caste Census Report)ಯನ್ನು ಒಪ್ಪಿಕೊಳ್ಳುವುದಕ್ಕೆ ತಯಾರಿಲ್ಲದ ಬಿಜೆಪಿ ನಾಯಕರು ಕುಂಟುನೆಪಗಳನ್ನು ಹೇಳುತ್ತಿದ್ದಾರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವಾಗ್ದಾಳಿ ನಡೆಸಿದ್ದಾರೆ. ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಜಾತಿ ಗಣತಿ ವರದಿ ಸೋರಿಕೆಯಾಗಿದೆ, ವೈಜ್ಞಾನಿಕವಾಗಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಸೋರಿಕೆ ಬಗ್ಗೆ ಖಚಿತ ಮಾಹಿತಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಳಿ ಇದ್ದರೆ ಅದರ ಬಗ್ಗೆ ತನಿಖೆ ನಡೆಸಲಿ’ ಎಂದು ಸವಾಲು ಹಾಕಿದ್ದಾರೆ.

‘ಸೋರಿಕೆ ಆಗಿದೆ ಎನ್ನಲಾದ ಜಾತಿಗಣತಿ ವರದಿಯ ಅಂಶಗಳೇ ಮೂಲ ವರದಿಯಲ್ಲಿ ಇವೆ ಎನ್ನುವುನ್ನು ಬಿಜೆಪಿ(BJP) ನಾಯಕರು ಅಷ್ಟೊಂದು ವಿಶ್ವಾಸದಿಂದ ಹೇಗೆ ಹೇಳಲು ಸಾಧ್ಯ? ಸರ್ಕಾರದ ಬಳಿ ಇರಬೇಕಾದ ಮೂಲ ವರದಿ ಬಿಜೆಪಿಯ ರಾಜ್ಯ ಕಚೇರಿಯಲ್ಲಿದೆಯೇ? ಸಿಎಂ ಕಚೇರಿಯಿಂದ ಅದು ಸೋರಿಕೆಯಾಗಿದೆಯೇ? ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರದ ಅವಧಿಯಲ್ಲಿಯೇ ಪೂರ್ಣಗೊಳಿಸಿ ಸ್ವೀಕರಿಸಬೇಕೆಂಬುದು ನನ್ನ ಉದ್ದೇಶವಾಗಿತ್ತು. ಅಂಕಿಅಂಶಗಳ ಮಾಹಿತಿ ಸಂಗ್ರಹವಾಗಿದ್ದರೂ  ವಿಶ್ಲೇಷಣೆಯ ಕೆಲಸ ಪೂರ್ಣಗೊಂಡಿರದ ಕಾರಣ  ಸಾಧ್ಯವಾಗಿರಲಿಲ್ಲ’ ಎಂದು ಸಿದ್ದರಾಮಯ್ಯ(Siddaramaiah) ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದ ಜನರಿಗೆ ಬಿಜೆಪಿ ಸರ್ಕಾರ ಶಾಪವಾಗಿದೆ: ಡಿ.ಕೆ.ಶಿವಕುಮಾರ್ ಆಕ್ರೋಶ

‘ಜಾತಿ ಗಣತಿ ವರದಿ(Caste Census Report)ಯನ್ನು ನಮ್ಮ ಪಕ್ಷದ ನಾಯಕರು ವಿರೋಧಿಸಿದ್ದರು ಎನ್ನುವುದು ಕಪೋಲ ಕಲ್ಪಿತ ಆರೋಪ. ಯಾರು? ಯಾವಾಗ? ವಿರೋಧಿಸಿದ್ದರು ಎನ್ನುವುದನ್ನು ಬಿಜೆಪಿ(BJP) ನಾಯಕರು ಬಹಿರಂಗ ಪಡಿಸಬೇಕು. ಜಾತಿ ಗಣತಿ ವರದಿ ಸೋರಿಕೆಯಾಗಿದ್ದರೂ ಅದರ ಪಾವಿತ್ರ್ಯವೇನು ಕಳೆದುಹೋಗುವುದಿಲ್ಲ. ಸೋರಿಕೆಯಿಂದಾಗಿ ಅಪರಾಧಿಗಳು ಓಡಿಹೋಗಲು ಅದೇನು ಅಪರಾಧದ ತನಿಖಾ ವರದಿಯೇ? ಅದೊಂದು ಸಮೀಕ್ಷಾ ವರದಿ. ಪರಿಶೀಲನೆ ನಡೆಯಬೇಕಾಗಿರುವುದು ಸಮೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ. ಅದರ ಬಗ್ಗೆ ಚರ್ಚೆ ನಡೆಯಲಿ’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ಮರಳಿ ರಾಜ್ಯ ಸರ್ಕಾರಕ್ಕೆ ನೀಡುವ ಸಂವಿಧಾನದ 127ನೇ ತಿದ್ದುಪಡಿ ಮಸೂದೆಯನ್ನು ಸಂಸತ್ ನಲ್ಲಿ ನಮ್ಮ ಪಕ್ಷದ ಸದಸ್ಯರು ಬೆಂಬಲಿಸಿರುವುದು ನಿಜ. ಆ ತಿದ್ದುಪಡಿ ಕಾಂಗ್ರೆಸ್(Congress) ಪಕ್ಷದ ಬೇಡಿಕೆಯ ಒತ್ತಡದಿಂದಾಗಿಯೇ ಮಂಡಿಸಲಾಗಿತ್ತು. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ನೆಪದಲ್ಲಿ ಸಂವಿಧಾನಕ್ಕೆ 123ನೇ ತಿದ್ದುಪಡಿ ಮಾಡಿ ಹಿಂದುಳಿದ ಜಾತಿಗಳನ್ನು ಗುರುತಿಸುವ ರಾಜ್ಯದ ಅಧಿಕಾರವನ್ನು ಕಿತ್ತುಕೊಳ್ಳುವ ಕೇಂದ್ರದ ಬಿಜೆಪಿ ಸರ್ಕಾರದ ಹುನ್ನಾರವನ್ನು 2017ರಲ್ಲಿಯೇ ನಮ್ಮ ಪಕ್ಷ ವಿರೋಧಿಸಿತ್ತು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ: ಸುತ್ತೋಲೆ ವಾಪಸ್ ಪಡೆಯಲು ಆದೇಶ

‘ಸಂವಿಧಾನದ 123ನೇ ತಿದ್ದುಪಡಿ ಮೂಲಕ ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ರಾಜ್ಯಗಳಿಂದ ಕಿತ್ತುಕೊಂಡದ್ದನ್ನು ಬಿಜೆಪಿ ಸರ್ಕಾರ 127ನೇ ತಿದ್ದುಪಡಿ ಮೂಲಕ ಮರಳಿ ನೀಡಿದೆ. ಇದೇನು ಹಿಂದುಳಿದ ಜಾತಿಗಳಿಗೆ ಮಾಡಿರುವ ಉಪಕಾರ ಅಲ್ಲ. ಮಾಡಿರುವ ತಪ್ಪನ್ನು ಒಪ್ಪಿ ಸರಿಪಡಿಸಿದೆಯಷ್ಟೆ’ ಅಂತಾ ಸಿದ್ದರಾಮಯ್ಯ ಕುಟುಕಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News