‘ಬುರುಡೆ ರಾಮಯ್ಯನಿಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ’

ಏಕವಚನದಲ್ಲಿಯೇ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯಗೆ ಟ್ವೀಟ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ.

Written by - Zee Kannada News Desk | Last Updated : Oct 17, 2021, 11:13 AM IST
  • ಪ್ರಧಾನಿ ಮೋದಿ ವಿರುದ್ಧ ಏಕವಚನ ಬಳಸಿದ್ದ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು
  • ಮಾತೆತ್ತಿದರೆ ಹಳ್ಳಿಯವನು ಎನ್ನುವ ಸಿದ್ದರಾಮಯ್ಯರಿಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ
  • ಪ್ರಧಾನಿಯ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ ಎಂದು ಬಿಜೆಪಿ ಟ್ವೀಟ್
‘ಬುರುಡೆ ರಾಮಯ್ಯನಿಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ’ title=
ಸಿದ್ದರಾಮಯ್ಯರಿಗೆ ಬಿಜೆಪಿ ತಿರುಗೇಟು ನೀಡಿದೆ

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿಯೇ ಆಕ್ರೋಶ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)ರಿಗೆ ಬಿಜೆಪಿ ತಿರುಗೇಟು ನೀಡಿದೆ. #ಬುರುಡೆರಾಮಯ್ಯ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ‘ಸಿದ್ದರಾಮಯ್ಯರಿಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ’ವೆಂದು ಟೀಕಿಸಿದೆ.

ಹಾನಗಲ್​ ಉಪಚುನಾವಣೆ(Hanagal By election)ಯ ಕಾಂಗ್ರೆಸ್​ ಅಭ್ಯರ್ಥಿ ಶ್ರೀನಿವಾಸ್​ ಮಾನೆ ಪರ ಪ್ರಚಾರ ಭಾಷಣ ಮಾಡಿದ್ದ ಸಿದ್ದರಾಮಯ್ಯ, ‘ಪ್ರಧಾನಿ ಮೋದಿ ವಿರುದ್ಧ ಮಾತಾಡಿದರೆ ದೇಶದ್ರೋಹಿಯಂತೆ, ಯಾವನ್ರಿ ಇವನು ಪ್ರಧಾನ ಮಂತ್ರಿ? ಇಂಥವರೆಲ್ಲ ಪ್ರಧಾನಿ ಆಗೋಕೆ ಲಾಯಕ್ಕೇನ್ರಿ? ನನಗೆ ವೈಯಕ್ತಿಕವಾಗಿ ಯಾರ ಮೇಲೂ ಕೋಪ ಇಲ್ಲ. ಅವರು ಮಾಡ್ತಿರೋದನ್ನು ನೋಡಿ ಕೋಪ ಬರ್ತಿದೆ’ ಅಂತಾ ಗುಡುಗಿದ್ದರು.

ಇದನ್ನೂ ಓದಿ: ಮುಂದಿನ ಚುನಾವಣೆಗೆ ರಕ್ತದಿಂದ ನೆಲವನ್ನು ಹದಗೊಳಿಸಲು ಬಿಜೆಪಿ ಅಣಿಯಾಗುತ್ತಿದೆ: ಕಾಂಗ್ರೆಸ್ ಆರೋಪ

ಏಕವಚನದಲ್ಲಿಯೇ ಪ್ರಧಾನಿ ಮೋದಿ(Narendra Modi) ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯಗೆ ಟ್ವೀಟ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ‘ಸಿದ್ದರಾಮಯ್ಯನವರೇ ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ. ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ’ ಅಂತಾ ಕುಟುಕಿದೆ.

‘ಸಿದ್ದರಾಮಯ್ಯ(Siddaramaiah)ನವರೇ ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ. ನಿಮ್ಮ ದುರಹಂಕಾರ, ದಾರ್ಷ್ಟ್ಯಕ್ಕಾಗಿ ಮಾಜಿ ಮುಖ್ಯಮಂತ್ರಿಯೊಬ್ಬರಿಂದ ನಿಮ್ಮ ಸಾಂವಿಧಾನಿಕ ಹುದ್ದೆಯ ಮೇಲೆ ಪ್ರಯೋಗವಾದ ಪದವನ್ನು ಹೇಗೆ ಅರಗಿಸಿಕೊಂಡಿರಿ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ವೈರಲ್ ವೀಡಿಯೋಗೆ ಬೇರೆ ಯಾರನ್ನೂ ದೂಷಿಸುವುದಿಲ್ಲ : ಡಿ. ಕೆ ಶಿವಕುಮಾರ್

‘ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾಗಿ ಪ್ರಧಾನ ಸೇವಕ ಸ್ಥಾನ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲೇ ಉಳಿಯಬೇಕೆಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?’ವೆಂದು ಬಿಜೆಪಿ(BJP) ಟ್ವೀಟ್ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News