KSRTC BUS: ಕರ್ನಾಟಕ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಮತ್ತೆ ಆರಂಭ

ಶಿವಸೇನೆ ಕಾರ್ಯಕರ್ತರ ಪುಂಡಾಟದಿಂದ ಸ್ಥಗಿತಗೊಂಡಿದ್ದ ಕರ್ನಾಟಕ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಪುನರಾರಂಭ  

Written by - Yashaswini V | Last Updated : Mar 16, 2021, 01:00 PM IST
  • ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಪುನರಾರಂಭ
  • ಕೊಲ್ಹಾಪುರ ಘಟನೆಯ ಬಳಿಕ ಮಹಾರಾಷ್ಟ್ರ ಗಡಿ ನಿಪ್ಪಾಣಿವರೆಗಷ್ಟೇ ಸಂಚರಿಸುತ್ತಿದ್ದ ಬಸ್
  • ಇದೀಗ ಮೂರು ದಿನಗಳ ಬಳಿಕ ಮತ್ತೆ ಬಸ್ ಸಂಚಾರ ಆರಂಭ
KSRTC BUS: ಕರ್ನಾಟಕ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಮತ್ತೆ ಆರಂಭ title=
Karnataka-Maharashtra Broder Dispute

ಬೆಳಗಾವಿ : ಕೊಲ್ಹಾಪುರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ಕಳೆದ ಮೂರು ದಿನಗಳಿಂದ ಸ್ಥಗಿತಗೊಂಡಿದ್ದ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಪುನರಾರಂಭಗೊಂಡಿದೆ.

ಕೊಲ್ಹಾಪುರ ಘಟನೆಯ ಬಳಿಕ ಮಹಾರಾಷ್ಟ್ರ ಗಡಿ ನಿಪ್ಪಾಣಿವರೆಗಷ್ಟೇ ಸಂಚರಿಸುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ಬಸ್​ಗಳನ್ನು ಇದೀಗ ಕೊಲ್ಹಾಪುರದವರೆಗೆ ಸಂಚರಿಸಲು ಅಧಿಕಾರಿಗಳು ಹಸಿರು ನಿಶಾನೆ ತೋರಿದ್ದಾರೆ.

ಇದನ್ನೂ ಓದಿ - ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ RT-PCR test ಕಡ್ಡಾಯ

ವಾಸ್ತವವಾಗಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ (Maharashtra) ಪ್ರತಿದಿನ 400 ಬಸ್​ಗಳು ಸಂಚರಿಸುತ್ತಿದ್ದವು. ಇದೇ ವೇಳೆ ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್​ಗಳು ಸಂಚರಿಸುತ್ತಿದ್ದವು. ಆದರೆ ಇತ್ತೀಚಿಗೆ ಶಿವಸೇನೆ ಕಾರ್ಯಕರ್ತರು ಕೊಲ್ಹಾಪುರದಲ್ಲಿ  ಕನ್ನಡ ನಾಮಫಲಕಗಳಿಗೆ ಮಸಿ ಬಳಿದು ಪುಂಡಾಟ ಮೆರೆದಿದ್ದರು. ಮಾತ್ರವಲ್ಲದೆ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಹಾಕದಂತೆ ಬೆದರಿಕೆ ಒಡ್ಡಿದ್ದರು. 

ಇದನ್ನೂ ಓದಿ - BPL Card: ಸಾರ್ವಜನಿಕರೇ ಗಮನಿಸಿ: ಸದ್ಯಕ್ಕೆ ಸಿಗಲ್ಲ ನಿಮಗೆ ಹೊಸ BPL​ ಕಾರ್ಡ್!

ಈ ಘಟನೆ ಬೆನ್ನಲ್ಲೇ ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ (Belagavi) ಶಿವಸೇನೆ ಕಚೇರಿ ಮೇಲೆ ದಾಳಿ ನಡೆಸಿ ಮರಾಠಿ ನಾಮಫಲಕಗಳಿಗೆ ಮಸಿ ಬಳೆದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ ಬಳಿಕ ಉಭಯ ರಾಜ್ಯಗಳ ನಡುವೆ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. 
ಇದೀಗ ಮೂರು ದಿನಗಳ ಬಳಿಕ ಬಸ್ ಸಂಚಾರ ಮತ್ತೆ ಆರಂಭಗೊಂಡಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News