Bus Strike: ಐದನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಇದಕ್ಕೆ ಸರ್ಕಾರದ ಅಭಿಪ್ರಾಯವೇನು?
ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸುವಲ್ಲಿ ತೊಂದರೆ ಮಾಡುತ್ತಿರುವ ನೌಕರರ `ಅಂತರ ನಿಗಮ ವರ್ಗಾವಣೆ` ಕೋರಿಕೆಯನ್ನು ಪರಿಗಣಿಸದಿರಲು ತೀರ್ಮಾನ
ಬೆಂಗಳೂರು: 6 ನೇ ವೇತನ ಆಯೋಗ ಜಾರಿಗೊಳಿಸುವ ಕುರಿತು ರಸ್ತೆ ಸಾರಿಗೆ ನೌಕರರ ಮುಷ್ಕರವು ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಬಸ್ ವ್ಯವಸ್ಥೆ ಇಲ್ಲದ ಕಾರಣ ಸಾರ್ವಜನಿಕರು ಪರದಾಡುತ್ತಿದ್ದಾರೆ.
ಈ ಮುಷ್ಕರದಲ್ಲಿ(Bus Strike) ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರ ಮತ್ತು ಸರ್ಕಾರ ನಡುವಿನ ಬಿಕ್ಕಟ್ಟಿನಿಂದಾಗಿ, ಬಹುಪಾಲು ಕಾರ್ಮಿಕರು ಕೆಲಸಕ್ಕೆ ಬಂದಿಲ್ಲ, ಈ ಕಾರಣದಿಂದ ಸರ್ಕಾರಿ ಬಸ್ಸುಗಳು ರಸ್ತೆಗಿಳಿದಿಲ್ಲ ಇದು ಪ್ರಯಾಣಿಕರ ಮೇಲೆ ಭಾರಿ ಪರಿಣಾಮ ಬೀರುತ್ತಿದೆ.
ಇದನ್ನೂ ಓದಿ : ಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾನಿಲಯ
"ನೋ ಕೆಲಸ ನೋ ಸಂಬಳ"(No Work No Pay) ಎಂಬ ಸರ್ಕಾರ ಬೆದರಿಕೆಯ ಮಧ್ಯೆ, ಕೆಲವು ನೌಕರರು ಕೆಲಸಕ್ಕೆ ಮರಳಿದ್ದಾರೆ ಮತ್ತು ಪೊಲೀಸ್ ಬೆಂಗಾವಲಿನೊಂದಿಗೆ ನಗರದ ಕೆಲವು ಮಾರ್ಗಗಳಲ್ಲಿ ಬಸ್‌ಗಳು ಸಂಚರಿಸುತ್ತಿವೆ. ರಾಜ್ಯದ ಇತರ ಕೆಲವಡೆ ಕೂಡ ಇದೇ ರೀತಿಯ ಕಂಡು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ : Heavy Rainfall: ಬಿರು ಬಿಸಿಲಿನ ಮಧ್ಯ ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆ!
ಬಸ್ ನಿಲ್ದಾಣ(Bus Stand)ಗಳಲ್ಲಿ ಬಸ್‌ಗಳಿಗಾಗಿ ಕಾಯುತ್ತಿರುವ ಪ್ರಯಾಣಿಕರ ಸಂಖ್ಯೆ ವಿರಳವಾಗಿದ್ದರೂ, ಇಂದು ಭಾನುವಾರವಾದ್ದರಿಂದ, ಮಂಗಳವಾರ ಯುಗಾದಿ ಆಚರಿಸಲು ತಮ್ಮ ಊರುಗಳಿಗೆ ಪ್ರಯಾಣಿಸುತ್ತಿರುವವರ ಮೇಲೆ ಪರಿಣಾಮ ಬೀರುತ್ತಿದೆ.
ಇದನ್ನೂ ಓದಿ : Night Curfew: ಇಂದಿನಿಂದ ಬೆಂಗಳೂರು ಸೇರಿದಂತೆ 6 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ: ಇಲ್ಲಿವೆ ಮಾರ್ಗಸೂಚಿಗಳು!
ಬಿಕ್ಕಟ್ಟನ್ನು ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಸಹಾಯ ಮಾಡಲು ಅಧಿಕಾರಿಗಳು ಖಾಸಗಿ ಬಸ್ಸುಗಳು(Private Buses), ಮಿನಿ ಬಸ್ಸುಗಳು, ಮ್ಯಾಕ್ಸಿ ಕ್ಯಾಬ್‌ಗಳು ಮತ್ತು ಇತರ ಪ್ರಯಾಣಿಕರ ಸಾರಿಗೆ ವಾಹನಗಳನ್ನು ಸಂಪರ್ಕಿಸಲು ಮುಂದಾಗಿದ್ದಾರೆ, ನಗರ ಮತ್ತು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಯಾಣಿಕರಿಗೆ ಈ ಮೂಲಕ ಸೇವೆಗಳನ್ನು ಒದಗಿಸುತ್ತಿರುವುದು ಕಂಡು ಬಂದಿದೆ.
Hatti Gold Mines: 'ಏಪ್ರಿಲ್ 30 ರಂದು 'ಹಟ್ಟಿ ಚಿನ್ನದ ಗಣಿ'ಗೆ ಮರುನಾಮಕರಣ'
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೌಕರರ ಮುಷ್ಕರಕ್ಕೆ ಪ್ರಚೋದನೆ ನೀಡಿ, ಕರ್ತವ್ಯ ನಿರ್ವಹಿಸುತ್ತಿರುವ ಸಹ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿ, ಬಸ್ಸುಗಳ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸುವಲ್ಲಿ ತೊಂದರೆ ಮಾಡುತ್ತಿರುವ ನೌಕರರ "ಅಂತರ ನಿಗಮ ವರ್ಗಾವಣೆ" ಕೋರಿಕೆಯನ್ನು ಪರಿಗಣಿಸದಿರಲು ತೀರ್ಮಾನಿಸಲಾಗಿದೆ. ಹಾಗೂ ಈಗಾಗಲೇ ಕೋರಿಕೆ ಮೇರೆಗೆ ಅಂತರ ವಿಭಾಗ ವರ್ಗಾವಣೆಗೊಂಡು, ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಈ ಅವಧಿಯಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಈ ಸಂಬಂಧ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಿ,ಮೂಲ ವಿಭಾಗಕ್ಕೆ ಮರು ವರ್ಗಾವಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಇದನ್ನ ಕೆಎಸ್‌ಆರ್‌ಟಿಸಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.