Bus Ticket Fare: ಶೇ.20 ರಷ್ಟು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ
Bus Ticket Fare: ಕಳೆದ ತ್ರೈಮಾಸಿಕದಲ್ಲಿ KSRTCಗೆ 295 ಕೋಟಿ ರೂ. ನಷ್ಟವಾಗಿದೆ. 40 ಹೊಸ ವೋಲ್ವೋ ಬಸ್‌ಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈಗಾಗಲೇ 600 ಸಾಮಾನ್ಯ ಬಸ್‌ಗಳನ್ನು ಖರೀದಿ ಮಾಡಲಾಗಿದೆ. KSRTC ಸಂಸ್ಥೆ ಉಳಿಯಬೇಕಾದರೆ ಟಿಕೆಟ್ ದರ ಹೆಚ್ಚಳ ಅನಿವಾರ್ಯವೆಂದು ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
Bus Ticket Fare: ಪೆಟ್ರೋಲ್-ಡೀಸೆಲ್, ತರಕಾರಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದರ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನರಿಗೆ KSRTC ಬಸ್ ಟಿಕೆಟ್ ದರ ಹೆಚ್ಚಳದ ಬರೆ ಬೀಳಲಿದೆ.
ಶೀಘ್ರವೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆ ಇದೆ. KSRTC ಬಸ್ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಿದ್ದೇವೆ ಅಂತಾ ಗುಬ್ಬಿ ಕಾಂಗ್ರೆಸ್ ಶಾಸಕ & KSRTC ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿರುವ ಅವರು, ʼಶೇ.15ರಿಂದ 20ರಷ್ಟು KSRTC ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆʼ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ನಿಮ್ಮ ಕರ್ಮ ಕಳಿಯಬೇಕು ಅಂದ್ರೆ ಏನು ಮಾಡಬೇಕು..?
ಈ ಹಿಂದೆ 2019ರಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳವಾಗಿತ್ತು. ತೈಲ ಬೆಲೆ ಏರಿಕೆ ಆಗಿರುವುದರಿಂದ ಟಿಕೆಟ್ ದರ ಹೆಚ್ಚಳ ಅನಿವಾರ್ಯ. ನೌಕರರಿಗೆ ಹೆಚ್ಚಿನ ಸಂಬಳ, ಸೌಲಭ್ಯ ಕಲ್ಪಿಸಲು ಟಿಕೆಟ್ ದರ ಹೆಚ್ಚಳ ಅನಿವಾರ್ಯವಾಗಿದೆ. 2020ರಲ್ಲೇ KSRTC ನೌಕರರ ವೇತನ ಪರಿಷ್ಕರಣೆ ಆಗಬೇಕಿತ್ತು. ಹೀಗಾಗಿ ಎರಡು ದಿನಗಳ ಹಿಂದಷ್ಟೇ ನಡೆದ ಬೋರ್ಡ್ ಮೀಟಿಂಗ್‌ನಲ್ಲಿ ಟಿಕೆಟ್ ದರ ಹೆಚ್ಚಳದ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಅಂತಾ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.
ಕಳೆದ ತ್ರೈಮಾಸಿಕದಲ್ಲಿ KSRTCಗೆ 295 ಕೋಟಿ ರೂ. ನಷ್ಟವಾಗಿದೆ. 40 ಹೊಸ ವೋಲ್ವೋ ಬಸ್‌ಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈಗಾಗಲೇ 600 ಸಾಮಾನ್ಯ ಬಸ್‌ಗಳನ್ನು ಖರೀದಿ ಮಾಡಲಾಗಿದೆ. KSRTC ಸಂಸ್ಥೆ ಉಳಿಯಬೇಕಾದರೆ ಟಿಕೆಟ್ ದರ ಹೆಚ್ಚಳ ಅನಿವಾರ್ಯ. ಈಗಾಗಲೇ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವಿದೆ. ಟಿಕೆಟ್ ದರ ಹೆಚ್ಚಳ ಮಾಡುವುದರಿಂದ ಪುರುಷ ಪ್ರಯಾಣಿಕರಿಗೆ ಕೊಂಚ ಹೊರೆಯಾಗಲಿದೆ. ಮಹಿಳೆಯ ಟಿಕೆಟ್ ದರವೂ ಏರಿಕೆಯಾಗಲಿದ್ದು, ಅದನ್ನು ಸರ್ಕಾರವೇ ಭರಿಸಲಿದೆ. ಟಿಕೆಟ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದ ಇನ್ನುಳಿದ ವಿಷಯ ಸಿಎಂ ವಿವೇಚನೆಗೆ ಬಿಟ್ಟಿದ್ದು ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ಸಂವಿಧಾನದ ವಿರುದ್ಧವಾಗಿರುವವರನ್ನು ಪ್ರಶ್ನಿಸಬೇಕು-ಸಿಎಂ ಸಿದ್ದರಾಮಯ್ಯ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.