ಹಾಸನ ಸಮಾವೇಶಕ್ಕೆ 275 ಬಸ್ ನಿಯೋಜನೆ; ಗಡಿಜಿಲ್ಲೆಯಲ್ಲಿ ಸಂಚಾರ ಭಾರೀ ವ್ಯತ್ಯಯ
Congress Jana Kalyan Smavesha: ಹಾಸನ ಸಮಾವೇಶಕ್ಕೆ ಚಾಮರಾಜನಗರದ ಅರ್ಧಕ್ಕೂ ಅಧಿಕ ಸಂಖ್ಯೆಯಲ್ಲಿ ಬಸ್ ನಿಯೋಜಿಸಿರುವುದರಿಂದ ಬಸ್ ಗಳಿಂದ ತುಂಬಿರುತ್ತಿದ್ದ ಚಾಮರಾಜನಗರ ಬಸ್ ನಿಲ್ದಾಣದಲ್ಲಿ ಬೆರಳಿಕೆ ಬಸ್ ಇದ್ದುದು ಕಂಡುಬಂದಿತು.
Hassan Congress Jana Kalyan Smavesha: ಹಾಸನದ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶಕ್ಕೆ ಚಾಮರಾಜನಗರ ಸಾರಿಗೆ ವಿಭಾಗವು 275 ಬಸ್ ಗಳನ್ನು ನಿಯೋಜಿಸಿದ್ದು ಸಂಚಾರದಲ್ಲಿ ಬಾರೀ ವ್ಯತ್ಯಯ ಕಂಡುಬಂದಿದೆ.
ಕೆಎಸ್‌ಆರ್‌ಟಿಸಿ ಉಪ ವಿಭಾಗಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದು ಹಾಸನದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾವೇಶಕ್ಕೆ ಚಾಮರಾಜನಗರ ವಿಭಾಗದಿಂದ 275 ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನೀಡಿರುವುದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‍ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.
ಇದನ್ನೂ ಓದಿ- ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಲಿಬಾಬಾ ನಲವತ್ತು ಕಳ್ಳರಿಗೆ ಹೋಲಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
ಇನ್ನು, ಹಾಸನ ಸಮಾವೇಶಕ್ಕೆ ಚಾಮರಾಜನಗರದ ಅರ್ಧಕ್ಕೂ ಅಧಿಕ ಸಂಖ್ಯೆಯಲ್ಲಿ ಬಸ್ ನಿಯೋಜಿಸಿರುವುದರಿಂದ ಬಸ್ ಗಳಿಂದ ತುಂಬಿರುತ್ತಿದ್ದ ಚಾಮರಾಜನಗರ ಬಸ್ ನಿಲ್ದಾಣದಲ್ಲಿ ಬೆರಳಿಕೆ ಬಸ್ ಇದ್ದುದು ಕಂಡುಬಂದಿತು.
ಬಸ್ ಗಾಗಿ ಪರದಾಡುತ್ತಿರುವ ಸಾರ್ವಜನಿಕರು:
ಚಾಮರಾಜನಗರದ 570 ಬಸ್ ಗಳಲ್ಲಿ ಹಾಸನದ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶಕ್ಕಾಗಿ 275 ಬಸ್ ನಿಯೋಜನೆ ಮಾಡಿರುವುದರಿಂದ ಇಂದು ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವವರು ಬಸ್ ಇಲ್ಲದೆ ಪರದಾಡುವಂತಾಗಿತ್ತು.
ಹಾಸನ ಸಮಾವೇಶಕ್ಕೆ ತೆರಳಿದ ಕಾರ್ಯಕರ್ತರು:
ಹಾಸನದಲ್ಲಿ ನಡೆಯಲಿರುವ ಜನ ಕಲ್ಯಾಣ ಸಮಾವೇಶಕ್ಕೆ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಗುರುವಾರ ಬೆಳಗ್ಗೆ ತೆರಳಿದ್ದಾರೆ. ಚಾಮರಾಜನಗರ, ಗುಂಡ್ಲುಪೇಟೆ ಪಟ್ಟಣ ಮತ್ತು ತಾಲೂಕಿನ ವಿವಿಧ ಗ್ರಾಮಗಳಿಂದ ಸಾವಿರಾರು ಮಂದಿ ಕಾರ್ಯಕರ್ತರು ತೆರಳಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.