Karnataka Water Supply and Sewerage Board regulations: ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶ ಹೊರಡಿಸಿದೆ. ಈ ಆದೇಶ ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು  ಎಚ್ಚರಿಕೆ ನೀಡಿದೆ. 


COMMERCIAL BREAK
SCROLL TO CONTINUE READING

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು  ವಾಹನಗಳ ಸ್ವಚ್ಚತೆಗೆ, ಕೈ ತೋಟ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರ ಬಳಕೆಗೆ,ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಬಳಸುವುದನ್ನು ನಿಷೇಧಿಸಲಾಗಿದೆ.  ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್ ಮನೋಹರ್  ಈ ಆದೇಶ ಹೊರಡಿಸಿದ್ದಾರೆ. 


ಇದನ್ನೂ ಓದಿ : ಯಲಹಂಕ ವಿದ್ಯುತ್ ಸ್ಥಾವರ ಘಟಕ ಸ್ಥಗಿತಕ್ಕೆ ಸ್ಥಳೀಯ ನಿವಾಸಿಗಳಿಂದ ಆಗ್ರಹ


ಈ ನಿಷೇದ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109ರ ಪ್ರಕಾರ ರೂ. 5000/- ಗಳ ದಂಡ ವಿಧಿಸಲಾಗುವುದು. ಮತ್ತೆ ಮತ್ತೆ ಈ ಉಲ್ಲಂಘನೆಯಾದರೆ 5000 ದ ಜೊತೆಗೆ ಹೆಚ್ಚುವರಿಯಾಗಿ 500 ರೂಪಾಯಿಯನ್ನು ಪ್ರತಿದಿನದಂತೆ ದಂಡ ವಿಧಿಸಲಾಗುವುದು ಹಾಕಲಾಗುವುದು ಎಂದು  ತಿಳಿಸಲಾಗಿದೆ. ಇನ್ನು ಯಾರಾದರೂ ಈ ನಿಯಮವನ್ನು ಉಲ್ಲಂಘಿಸುವುದು ಗಮನಕ್ಕೆ ಬಂದರೆ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ : 1916 ಗೆ ತಿಳಿಸಬಹುದಾಗಿದೆ ಎಂದು ಅವರು ಮನವಿ ಮಾಡಿದ್ದಾರೆ.


ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟವೂ ಕುಸಿದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟುವ ಅವಶ್ಕತೆಯನ್ನು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ  ಸೂಚನೆ ನೀಡಲಾಗಿದೆ. 


ಇದನ್ನೂ ಓದಿ : KEA: ಕೆಐಎಯಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 15 ರವರೆಗೆ ಅವಕಾಶ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.