BWSSB : ನೋಂದಣಿಯಾಗದ ನೀರಿನ ಟ್ಯಾಂಕರ್‌ಗಳ ವಿರುದ್ಧ ಕ್ರಮ

ನೋಂದಣಿ ಆಗದೆ ಇರುವಂತಹ ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ. 

Written by - Zee Kannada News Desk | Last Updated : Mar 18, 2024, 06:53 PM IST
  • ಶೇ.95 ರಷ್ಟು ನೀರಿನ ಖಾಸಗಿ ಟ್ಯಾಂಕರ್‌ಗಳನ್ನ ನೋಂದಾಯಿಸಲಾಗಿದೆ.
  • ನೋಂದಣಿ ಆಗದೆ ಇರುವಂತಹ ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.
  • ಕುಡಿಯುವ ನೀರು ಪೂರೈಸುವ ಖಾಸಗಿ ಟ್ಯಾಂಕರ್‌ಗಳ ನೋಂದಣಿ ಪ್ರಕ್ರಿಯೆಯ ಗಡುವು ದಿನಾಂಕ ಮಾರ್ಚ್ 15ಕ್ಕೆ ಮುಗಿದಿದೆ.
BWSSB : ನೋಂದಣಿಯಾಗದ ನೀರಿನ ಟ್ಯಾಂಕರ್‌ಗಳ ವಿರುದ್ಧ ಕ್ರಮ title=

BWSSB :  ಬೆಂಗಳೂರಿನಲ್ಲಿ ಖಾಸಗಿ ನೀರಿನ ಟ್ಯಾಂಕರ್‌ಗಳ ನೋಂದಣಿ ಕಾರ್ಯ ಮುಗಿದಿದ್ದು, ಶೇ.95 ರಷ್ಟು ಖಾಸಗಿ ನೀರಿನ ಟ್ಯಾಂಕರ್‌ಗಳನ್ನ ಈಗಾಗಲೇ ನೋಂದಾಯಿಸಲಾಗಿದೆ. ನೋಂದಣಿ ಆಗದೇ ಇರುವ ಖಾಸಗಿ  ನೀರಿನ ಟ್ಯಾಂಕರ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ. 

 ಕುಡಿಯುವ ನೀರು ಪೂರೈಸುವ ಖಾಸಗಿ ಟ್ಯಾಂಕರ್‌ಗಳ ನೋಂದಣಿ ಪ್ರಕ್ರಿಯೆಯ ಗಡುವು ದಿನಾಂಕ ಮಾರ್ಚ್ 15ಕ್ಕೆ ಮುಗಿದಿದೆ. ಶೇ.95 ರಷ್ಟು ನೀರಿನ ಖಾಸಗಿ ಟ್ಯಾಂಕರ್‌ಗಳನ್ನ ನೋಂದಾಯಿಸಲಾಗಿದೆ.

ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ಬೆಂಗಳೂರಿನ ಕೊಳಚೆ ಪ್ರದೇಶಗಳಾದ ಭಾಶ್ಯಾಂ ಪಾರ್ಕ್, ದೀನ ಬಂಧು ನಗರ, ಶ್ರೀ ರಾಮ ನಗರಿ ಸೇರಿದಂತೆ ಜನಸಂದ್ರತೆಯ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ, ನಾಗರಿಕರೊಂದಿಗೆ ನೀರಿನ ವಿತರಣೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಇದನ್ನು ಓದಿ : Bay Leaves Remedy: ರಾತ್ರೋರಾತ್ರಿ ನಿಮ್ಮನ್ನು ಶ್ರೀಮಂತರನ್ನಾಗಿಸುತ್ತವೆ ತಮಾಲಪತ್ರದ ಈ ಉಪಾಯಗಳು!

ಕಾವೇರಿ ನೀರಿನ ಸಂಪರ್ಕ ಇರುವಂತಹ ಪ್ರದೇಶಗಳಲ್ಲಿ ಈಗಾಗಲೇ ಸಮರ್ಪಕವಾದ ವಿತರಣೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೇಳಿದರು.

ಬಿಬಿಎಂಪಿಯಿಂದ ನಗರದ ಹೊರಭಾಗದಲ್ಲಿ ಇರುವಂತಹ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಆ ಗ್ರಾಮಗಳಿಗೆ 
ಇನ್ನು ಕಾವೇರಿ ನೀರಿನ ಸಂಪರ್ಕ ನೀಡಲಾಗಿಲ್ಲ. ಈ ಭಾಗದಲ್ಲಿ ಅಂತರ್ಜಲದ ಮೇಲೆ ಹೆಚ್ಚಿನ ಅವಲಂಬನೆ ಇದೆ ಹಾಗಾಗಿ  ನಗರದ ಹೊರಭಾಗದ ಗ್ರಾಮಗಳಿಗೂ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ದಿನದ 24 ಗಂಟೆಗಳ ಕಾಲ ನಗರದ ಕುಡಿಯುವ ನೀರು ಸರಬರಾಜು ಸಮರ್ಪಕವಾಗಿ ನಡೆಯುವಂತೆ ಮಂಡಳಿ ವತಿಯಿಂದ ನಿಗಾ ವಹಿಸಲಾಗುತ್ತಿದೆ ಎಂದರು.

ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದರೆ ಅಥವಾ ನೀರಿನ ಗುಣಮಟ್ಟದಲ್ಲಿ ಸಮಸ್ಯೆ ಕಂಡುಬಂದಲ್ಲಿ ನಾಗರಿಕರು 1916 ಮತ್ತು 1533 ಗೆ ಕರೆ ಮಾಡಿ, ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆಯ ವಿಶೇಷ ಆಯುಕ್ತ ಸುರೋಲ್ಕರ್ ವಿಕಾಸ್ ಕಿಶೋರ್ ಅವರು ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರದಲ್ಲಿ ನೋಂದಣಿ ಮಾಡಿಕೊಂಡಿರುವ ಖಾಸಗಿ ಟ್ಯಾಂಕರ್‌ಗಳಿಗೆ ವಾಹನಗಳ ಸಂಖ್ಯೆ, ಮಾಲೀಕರ ಹೆಸರು, ಸ್ವಯಂ ನೋಂದಣಿ ಸಂಖ್ಯೆ ವಿವರವಿರುವ ಸ್ಟಿಕ್ಕರ್‌ಗಳನ್ನು ವಾಹನಗಳ ಮೇಲೆ ಅಂಟಿಸುವಂತೆ ಬಿಬಿಎಂಪಿ ಸೂಚನೆ ನೀಡಿದೆ. ಸ್ಟಿಕ್ಕರ್ ಇಲ್ಲದ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದಿಲ್ಲ. ಖಾಸಗಿ ಟ್ಯಾಂಕರ್‌ಗಳು ಸರ್ಕಾರ ನಿಗದಿಪಡಿಸಿದ ದರದಂತೆ ಮಾತ್ರ ನೀರು ಪೂರೈಸಬೇಕು ಮತ್ತು ನೋಂದಣಿಯಾಗದ ಟ್ಯಾಂಕರ್‌ಗಳಿಗೆ ನೀರು ಸರಬರಾಜು ಮಾಡಲು ಅವಕಾಶವಿರುವುದಿಲ್ಲ. 

ಇದನ್ನು ಓದಿ : Modi Government ಅದ್ಭುತ ಯೋಜನೆ, ಮಹಿಳೆಯರ ಖಾತೆಗೆ ಬರುತ್ತವೆ 5 ಲಕ್ಷ ರೂ!

ಕೆಲವೆಡೆ ಟ್ರ್ಯಾಕ್ಟರ್ ಮಾರ್ಪಾಡಿಸಿ ನೀರಿನ ಟ್ಯಾಂಕರ್‌ಗಳಾಗಿ ಪರಿವರ್ತಿಸಲಾಗಿದೆ. ಇವುಗಳ ಮೇಲೆಯೂ ನಿಗಾ ಇಡಲಾಗುವುದು ಮತ್ತು ನೋಂದಣಿಗೆ ಗಡುವು ನೀಡಿದ ಸಮಯದಲ್ಲಿ ನೋಂದಣಿ ಮಾಡದೆ ಇರುವಂತಹ ಖಾಸಗಿ ನೀರಿನ ಟ್ಯಾಂಕರ್‌ಗಳ ಮಾಲೀಕರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News