Bengaluru Water Crisis: ಅಪಾರ್ಟ್ಮೆಂಟ್ ಮಾಲೀಕರೇ ಎಚ್ಚರ..! ಏರೇಟರ್ ಅಳವಡಿಸದಿದ್ದರೇ ಬೀಳುತ್ತೆ ದಂಡ!
Bengaluru Water Crisis: ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಸಂಸ್ಥೆಗಳು, ಮಾಲ್‌ಗಳು, ಸರ್ಕಾರಿ ಕಟ್ಟಡಗಳು, ಸ್ಟಾರ್ ಹೋಟೆಲ್‌ಗಳು ಮತ್ತು ಧಾರ್ಮಿಕ ಪೂಜಾ ಸ್ಥಳಗಳಲ್ಲಿ ಟ್ಯಾಪ್‌ಗಳಲ್ಲಿ ಏರೇಟರ್‌ಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳು ಹೇಳಿದ್ದರು.
ಬೆಂಗಳೂರು: ನೀರಿನ ಸೋರಿಕೆಯನ್ನು ತಡೆಗಟ್ಟಲು ಏರೇಟರ್‌ಗಳನ್ನು ಅಳವಡಿಸಲಾಗಿದೆಯೇ ಎಂದು ಪರಿಶೀಲನೆಯನ್ನು ಪ್ರಾರಂಭಿಸುವುದಾಗಿ BWSSB ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ನಗರದಲ್ಲಿ ನೀರಿನ ಬಿಕ್ಕಟ್ಟು ನಿರ್ವಹಿಸಲು ಬಿಡಬ್ಲ್ಯುಎಸ್‌ಎಸ್‌ಬಿ ಈ ಕೆಲಸಕ್ಕೆ ಮುಂದಾಗಿದೆ.
ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಸಂಸ್ಥೆಗಳು, ಮಾಲ್‌ಗಳು, ಸರ್ಕಾರಿ ಕಟ್ಟಡಗಳು, ಸ್ಟಾರ್ ಹೋಟೆಲ್‌ಗಳು ಮತ್ತು ಧಾರ್ಮಿಕ ಪೂಜಾ ಸ್ಥಳಗಳಂತಹ ಬೃಹತ್ ನೀರಿನ ಗ್ರಾಹಕರು ಮಾರ್ಚ್ 31 ರೊಳಗೆ ಏರೇಟರ್‌ಗಳನ್ನು ಅಳವಡಿಸಬೇಕು ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಈ ಹಿಂದೆಯೇ ಆದೇಶಿಸಿತ್ತು. ಬಳಿಕ ಏರೇಟರ್‌ಗಳನ್ನು ಅಳವಡಿಸುವ ಗಡುವನ್ನು ಮೇ 07 ರವರೆಗೆ ವಿಸ್ತರಿಸಲಾಗಿತ್ತು.
ಇದನ್ನೂ ಓದಿ: 25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್
ನೀರನ್ನು ಉಳಿಸಲು ಏರೇಟರ್‌ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಅಧಿಕಾರಿಗಳು ಪರಿಶೀಲನೆಗೆ ಬಂದವೇಳೆ ಏರೇಟರ್ ಅಳವಡಿಕೆ ಆಗದೇ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿತ್ತು. ಹಾಗಾಗಿ ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಸಂಸ್ಥೆಗಳು, ಮಾಲ್‌ಗಳು, ಸರ್ಕಾರಿ ಕಟ್ಟಡಗಳು, ಸ್ಟಾರ್ ಹೋಟೆಲ್‌ಗಳು ಮತ್ತು ಧಾರ್ಮಿಕ ಪೂಜಾ ಸ್ಥಳಗಳಲ್ಲಿ ಟ್ಯಾಪ್‌ಗಳಲ್ಲಿ ಏರೇಟರ್‌ಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳು ಹೇಳಿದ್ದರು.
ನೀರಿನ ಸೋರಿಕೆಯನ್ನು ತಡೆಗಟ್ಟಲು 90,000 ಹೆಚ್ಚಿನ ಏರೇಟರ್‌ಗಳನ್ನು ಖರೀದಿಸಲು ಬಿಡಬ್ಲ್ಯೂಎಸ್‌ಎಸ್‌ಬಿ ನಿರ್ಧರಿಸಿದೆ. ಅವುಗಳನ್ನು ಖರೀದಿಸಲು 44 ಲಕ್ಷ ರೂಪಾಯಿ ವೆಚ್ಚ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಎಲ್ಲಾ BWSSB ಕಚೇರಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಒಳಗೊಂಡಂತೆ ಸರ್ಕಾರಿ ಕಚೇರಿಗಳಲ್ಲಿ 20,000 ಕ್ಕೂ ಹೆಚ್ಚು ಏರೇಟರ್‌ಗಳು ಅಥವಾ ಹರಿವಿನ ನಿರ್ಬಂಧಕಗಳನ್ನು ಮಂಡಳಿಯೇ ಸ್ಥಾಪಿಸಿತ್ತು.
ಇದನ್ನೂ ಓದಿ: ತೇಗೂರು, ಮೂರು ಮನೆ ಹಳ್ಳಿ ಗ್ರಾಮಗಳಲ್ಲಿ ಕಾಡಾನೆ ದಾಂಧಲೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.