2027ರ ಡಿಸೆಂಬರ್ ಹೊತ್ತಿಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ

ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆ(BSRP) ಗೆ ಜಮರ್ನಿಯ KFW ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ ಕೆ-ರೈಡ್ ಸಂಸ್ಥೆಗೆ ₹4,561 ಕೋಟಿ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, ಶುಕ್ರವಾರ ಅಧಿಕೃತವಾಗಿ ಒಡಂಬಡಿಕೆಗೆ ಸಹಿ ಹಾಕಲಾಯಿತು.

Written by - Manjunath N | Last Updated : Feb 10, 2024, 08:11 AM IST
  • ಜರ್ಮನಿ ಬ್ಯಾಂಕ್ ನಿಂದ ಕೆ-ರೈಡ್ ಗೆ ₹4,561 ಕೋಟಿ ಸಾಲ, ಒಡಂಬಡಿಕೆಗೆ ಅಂಕಿತ
  • ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯವಿದೆ.
  • 2027ರ ಡಿಸೆಂಬರ್ ವೇಳೆಗೆ BSRP ರೈಲು ಯೋಜನೆ ಪೂರ್ಣಗೊಳ್ಳಲಿದ್ದು, ರಾಜಧಾನಿಯ ಚಹರೆಯನ್ನೇ ಆಮೂಲಾಗ್ರವಾಗಿ ಬದಲಿಸಲಿದೆ ಎನ್ನಲಾಗಿದೆ.
 2027ರ ಡಿಸೆಂಬರ್ ಹೊತ್ತಿಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ title=

ಬೆಂಗಳೂರು: ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆ(BSRP) ಗೆ ಜಮರ್ನಿಯ KFW ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ ಕೆ-ರೈಡ್ ಸಂಸ್ಥೆಗೆ ₹4,561 ಕೋಟಿ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, ಶುಕ್ರವಾರ ಅಧಿಕೃತವಾಗಿ ಒಡಂಬಡಿಕೆಗೆ ಸಹಿ ಹಾಕಲಾಯಿತು.

ಕೆ-ರೈಡ್ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯೂ ಆದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಾದ ಶ್ರೀಮತಿ ಎನ್. ಮಂಜುಳಾ ಮತ್ತು ಕೆಎಫ್ ಡಬ್ಲ್ಯೂ ಪರವಾಗಿ ಅದರ ಭಾರತದ ನಿರ್ದೇಶಕರಾದ ಶ್ರೀ ವೂಲ್ಫ್ ಮೌತ್ ಅಂಕಿತ ಹಾಕಿದರು.

ಇದನ್ನೂ ಓದಿ: “ರವೀಂದ್ರ ಜಡೇಜಾಗೂ ನಮಗೂ ಸಂಬಂಧವಿಲ್ಲ, ಮಾತು ಬಿಟ್ಟು ವರ್ಷಗಳೇ ಕಳೆದಿವೆ”- ಜಡ್ಡು ತಂದೆಯ ಹೇಳಿಕೆ

ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿರುವ ಜರ್ಮನಿ ಕಾನ್ಸುಲ್ ಜನರಲ್ ಶ್ರೀ ಅಕಿಂ ಬರ್ಕಾರ್ಟ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಯವರಾದ ಶ್ರೀ ರಾಕೇಶ್ ಸಿಂಗ್, KFW ಹಿರಿಯ ಪರಿಣತೆ ಸ್ವಾತಿ ಖನ್ನಾ ಮತ್ತು ಕಾಂಚಿ ಅರೋರ ಮತ್ತಿತರರು ಉಪಸ್ಥಿತರಿದ್ದರು.

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯವಿದೆ. ಜೊತೆಗೆ, ನಗರಗಳಲ್ಲಿ ಸುಗಮ ಸಂಚಾರ ಜಾಲವನ್ನು ಅಭಿವೃದ್ಧಿ ಪಡಿಸುವುದು ಸರಕಾರದ ಗುರಿಯಾಗಿದ್ದು, 2027ರ ಡಿಸೆಂಬರ್ ವೇಳೆಗೆ BSRP ರೈಲು ಯೋಜನೆ ಪೂರ್ಣಗೊಳ್ಳಲಿದ್ದು, ರಾಜಧಾನಿಯ ಚಹರೆಯನ್ನೇ ಆಮೂಲಾಗ್ರವಾಗಿ ಬದಲಿಸಲಿದೆ ಎನ್ನಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News