By-Election Results 2024: ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
By-Election Results 2024: ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತಾ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಅರ್ಪಿಸಿದ್ದಾರೆ.
Karnataka By-Election Results 2024: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಬಿಜೆಪಿ-ಜೆಡಿಎಸ್ ನಾಯಕರಿಗೆ ತೀವ್ರ ಮುಖಭಂಗ ಉಂಟಾಗಿದೆ. ಮೂರು ಕ್ಷೇತ್ರಗಳಲ್ಲಿ ಮತದಾರ ʼಕೈʼಗೆ ಜೈ ಎಂದಿದ್ದು, ಸಿಎಂ ಸಿದ್ದರಾಮಯ್ಯರಿಗೆ ಹರ್ಷ ತಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ʼವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳುʼ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಪ್ರಮುಖ ಕಾರಣಗಳೇನು?
ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ.ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳುʼ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಅಂತಾ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ-ಡಿಕೆಶಿ ನಾಯಕತ್ವದ ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಸಂದ ಜಯ: ಜಮೀರ್ ಅಹಮದ್ ಖಾನ್
ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತಾ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಅರ್ಪಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.