ಮೈಸೂರು : ವಿದ್ಯಾವಂತರು ಐಸಿಸ್ ಸಂಘಟನೆ ಜತೆ ನಂಟು ಹೊಂದಿರುವುದು ಆತಂಕಕಾರಿ ಬೆಳವಣಿಗೆ. ಶಿವಮೊಗ್ಗ ಮಾತ್ರವಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂತಹ ಬೆಳವಣಿಗೆ ಕಂಡುಬಂದಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಬೈ.ವಿಜಯೇಂದ್ರ ಹೇಳಿದರು.
ನಗರದಲ್ಲಿ ಉಗ್ರರ ಬಂಧನ ವಿಚಾರವಾಗಿ ಮಾತನಾಡಿದ ಅವರು, ಶಿವಮೊಗ್ಗ ಮಾತ್ರವಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂತಹ ಬೆಳವಣಿಗೆ ಕಂಡುಬಂದಿದೆ. ಅದರಲ್ಲೂ ಇಂಜಿನಿಯರಿಂಗ್ ಸೇರಿದಂತೆ ಉತ್ತಮ ವಿದ್ಯಾಭ್ಯಾಸ ಮಾಡಿರುವವರು ಐಸಿಸ್ ಸಂಪರ್ಕ ಹೊಂದಿರುವುದು ಗೊತ್ತಾಗಿದೆ. ಕುವೆಂಪು ಅವರು ಹೇಳಿದಂತೆ ಸರ್ವಜನಾಂಗದ ಶಾಂತಿಯ ತೋಟ. ಶಾಂತಿ ವಾತಾವರಣ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ: ಹಿರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ, ಏಮ್ಸ್ ನಲ್ಲಿ ಕೊನೆಯುಸಿರು
ಅಲ್ಲದೆ, ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರು ಇರುವ ಜಾಗದಲ್ಲಿ ಸಾರ್ವಕರ್ ಫೋಟೋ ಯಾಕೆ ಹಾಕಬೇಕು ಅಂತ ಕೇಳಿದ್ದರು. ಇಂತಹ ಓಲೈಕೆ ಮಾತುಗಳಿಂದ ಶಾಂತಿ ಕದಡುವ ವಾತಾವರಣ ನಿರ್ಮಾಣ ಆಗುತ್ತಿದೆ. ಚುನಾವಣಾ ವರ್ಷ ಆಗಿರುವುದರಿಂದ ಇಂತಹ ಮಾತುಗಳು ಸಹಜ ಎಂದು ಹೇಳಿದರು.
ಸಿಎಂ ಮೇಲೆ ಯಡಿಯೂರಪ್ಪ ಒತ್ತಡ ಹಾಕುತ್ತಿಲ್ಲ
ಪಂಚಮ ಸಾಲಿ ಮೀಸಲಾತಿಗೆ ಯಡಿಯೂರಪ್ಪ ವಿರೋಧ ಮಾಡುತ್ತಿದ್ದಾರೆ ಎಂಬ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಯಾರೋ ರಾಜಕೀಯ ಕಾರಣಕ್ಕೆ ಸ್ವಾಮೀಜಿಗಳ ಮನಸ್ಸು ಕೆಡಿಸಿದ್ದಾರೆ. ಯಡಿಯೂರಪ್ಪ ಹಾಗೂ ನನ್ನ ಹೆಸರನ್ನು ಈ ವಿಚಾರದಲ್ಲಿ ಪದೇ ಪದೇ ಎಳೆದು ತರುತ್ತಿದ್ದಾರೆ. ಯಡಿಯೂರಪ್ಪನವರು ಮೀಸಲಾತಿಗೆ ವಿರೋಧಿಸುತ್ತಿಲ್ಲ. ಸಿಎಂ ಮೇಲೆ ಯಡಿಯೂರಪ್ಪ ಅವರು ಯಾವುದೇ ಒತ್ತಡ ಏರಿಲ್ಲ. ಯಡಿಯೂರಪ್ಪ ಹಾಗೂ ವಿಜಯೇಂದ್ರ ಪಂಚಮಸಾಲಿ ಲಿಂಗಾಯತರ ವಿರೋಧಿ ಎಂದು ಬಿಂಬಿಸುವ ಯತ್ನ ನಡೆಯುತ್ತಿದೆ ಎಂದು ಹೇಳಿದರು.
ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟಿರುವುದು ಹಳೇ ಮೈಸೂರು
ಇನ್ಮುಂದೆ ಚುನಾವಣಾ ತಯಾರಿ ಶುರು ಮಾಡಬೇಕು. ನಾನು ಚುನಾವಣೆಗೆ ಎಲ್ಲೇ ಸ್ಪರ್ಧಿಸಿದರೂ ಹಳೇ ಮೈಸೂರು ಭಾಗವನ್ನು ನಾನು ಯಾವತ್ತೂ ಮರೆವುದಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟಿರುವುದು ಹಳೇ ಮೈಸೂರು ಮತ್ತು ವರುಣ ಕ್ಷೇತ್ರ. ಇಲ್ಲಿ ಪಕ್ಷ ಸಂಘಟನೆ ನಿರಂತರವಾಗಿ ನಡೆಸುತ್ತೇನೆ ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.