ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣಾ ರಾಜಕೀಯಕ್ಕೆ ಬಹುತೇಕ ಎಂಟ್ರಿ ಕೊಟ್ಟಂತಾಗಿದೆ. ವಿಧಾನ ಪರಿಷತ್‌ನ 1 ಸ್ಥಾನಕ್ಕೆ ವಿಜಯೇಂದ್ರರ ಹೆಸರನ್ನು ಅಂತಿಮಗೊಳಿಸಲಾಗಿದೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೀಗಾಗಿ ವಿಜಯೇಂದ್ರ ಅವರ ಮೇಲ್ಮನೆ ಎಂಟ್ರಿ ಬಹುತೇಕ ಖಚಿತವಾದಂತಾಗಿದೆ.


COMMERCIAL BREAK
SCROLL TO CONTINUE READING

ವಿಧಾನ ಪರಿಷತ್‌ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ನಡೆದ ಈ ಸಭೆಯಲ್ಲಿ ವಿಧಾನ ಪರಿಷತ್‍ನ 1 ಸ್ಥಾನಕ್ಕೆ ವಿಜಯೇಂದ್ರ ಹೆಸರು ಫೈನಲ್ ಮಾಡಲಾಗಿದೆ. ಉಳಿದ 3 ಸ್ಥಾನಕ್ಕೆ ತಲಾ 5 ಹೆಸರುಗಳಂತೆ 15 ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಸೇರಿ ರಾಜ್ಯಸಭೆಗೆ ಐದು ಹೆಸರು ಶಿಫಾರಸು ಮಾಡಲಾಗಿದೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತದೆ.


ಇದನ್ನೂ ಓದಿ: ಸಿದ್ದರಾಮಯ್ಯನವರೇ ನನ್ನ ಜೀವನ ತೆರೆದ ಪುಸ್ತಕವಿದ್ದಂತೆ: ಸಚಿವ ಹೆಬ್ಬಾರ್


ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ರಾಜೇಂದ್ರ, ನಿರ್ಮಲಾ ಕುಮಾರ್ ಸುರಾನಾ, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಮಹೇಶ್ ಟೆಂಗಿನಕಾಯಿ, ಓಬಿಸಿ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೆಸರುಗಳನ್ನು ಉಳಿದ ಸ್ಥಾನಗಳಿಗೆ ಶಿಫಾರಸು ಮಾಡಲಾಗಿದೆ. ಕಲೆ, ಸಾಹಿತ್ಯ, ಸಿನಿಮಾ, ರಂಗಭೂಮಿ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಒಬ್ಬರ ಹೆಸರನ್ನು ರಾಜ್ಯ ಬಿಜೆಪಿ ಘಟನೆ ಶಿಫಾರಸ್ಸು ಮಾಡಿದೆ


ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ 1:5ರ ಅನುಪಾತದ ಆಧಾರದಲ್ಲಿ ಸಂಭಾವ್ಯರ ಪಟ್ಟಿ ರವಾನೆಗೆ ನಿರ್ಧಾರಿಸಲಾಗಿದೆ. ಅಳೆದುತೂಗಿ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಅಕ್ರಮ ಲ್ಯಾಪ್‌ಟ್ಯಾಪ್ ಖರೀದಿ ಸಿದ್ದರಾಮಯ್ಯ ಸರ್ಕಾರದ ಕೂಸು: ಬಿಜೆಪಿ  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.