ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ‘ಕೊಲೆ ಭಾಗ್ಯ’ ಕಾಣುವಂತಾಗಿದೆ: ಬಿ.ವೈ.ವಿಜಯೇಂದ್ರ

Neha & Anjali Murder Case: ರಾಜ್ಯದಾದ್ಯಂತ ಹೆಣ್ಣು ಮಕ್ಕಳ ಸರಣಿ ಕೊಲೆಗಳು, ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

Written by - Puttaraj K Alur | Last Updated : May 17, 2024, 06:10 PM IST
  • ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಕ್ರಿಮಿನಲ್‌ಗಳು, ಕೊಲೆಗಡುಕರ ತಾಣವನ್ನಾಗಿಸುತ್ತಿದೆ
  • ಹಾಡುಹಗಲೇ ಅಮಾಯಕ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈಯಲಾಗುತ್ತಿದೆ
  • ಮನೆಗಳಿಗೇ ನುಗ್ಗಿ ಗೃಹಲಕ್ಷ್ಮಿಯರನ್ನು ಚಾಕುವಿನಿಂದ ಇರಿದು ಕೊಲ್ಲಲಾಗುತ್ತಿದೆ
ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ‘ಕೊಲೆ ಭಾಗ್ಯ’ ಕಾಣುವಂತಾಗಿದೆ: ಬಿ.ವೈ.ವಿಜಯೇಂದ್ರ  title=
ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ!

ಬೆಂಗಳೂರು: “ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ‘ಕೊಲೆ ಭಾಗ್ಯ’ ಕಾಣುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಶುಕ್ರವಾರ ಟ್ವೀಟ್‌ ಮಾಡಿರುವ ಅವರು,  ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಸಾಮಾಜಿಕ ಸುಭದ್ರತೆಗೆ ಹೆಸರಾಗಿದ್ದ ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ತನ್ನ ಒಂದು ವರ್ಷದ ಆಡಳಿತದಲ್ಲಿ ಕ್ರಿಮಿನಲ್‌ಗಳು, ಕೊಲೆಗಡುಕರ ತಾಣವನ್ನಾಗಿಸುತ್ತಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ  ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಬೀಗುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹಾಡುಹಗಲೇ ಅಮಾಯಕ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈಯಲಾಗುತ್ತಿದೆ, ಮನೆಗಳಿಗೇ ನುಗ್ಗಿ ಗೃಹಲಕ್ಷ್ಮಿಯರನ್ನು ಚಾಕುವಿನಿಂದ ಇರಿದು ಕೊಲ್ಲಲಾಗುತ್ತಿದೆ, ಭಾಗ್ಯಲಕ್ಷ್ಮಿಯರನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಅರಣ್ಯರೋಧನವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ: ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್

ರಾಜ್ಯದಾದ್ಯಂತ ಹೆಣ್ಣು ಮಕ್ಕಳ ಸರಣಿ ಕೊಲೆಗಳು, ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಕೆಲ ದಿನಗಳ ಹಿಂದೆ ಹುಬ್ಬಳ್ಳಿಯ ನೇಹಾ, ಮಡಿಕೇರಿಯಲ್ಲಿ ಮೀನಾಳ ರುಂಡ ಕತ್ತರಿಸಿ ಕೊಲೆಗೈದ ಘಟನೆ, ಮತ್ತದೇ ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ, ಬೆಂಗಳೂರಿನ ಪದವಿ ವಿದ್ಯಾರ್ಥಿನಿಯ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವುದೂ ಸೇರಿದಂತೆ ನಿರಂತರ ಕೊಲೆ ಪ್ರಕರಣಗಳು ವರದಿಯಾಗುತ್ತಲೇ ಇವೆ ಎಂದು ಹೇಳಿದ್ದಾರೆ. 

ಸದ್ಯದ ಪರಿಸ್ಥಿತಿಯಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಮನೆಯಿಂದ ಆಚೆ ಬರಲೂ ಭಯ ಪಡುವ ವಾತಾವರಣ ನಿರ್ಮಾಣಗೊಂಡಿದೆ. ದುಷ್ಟ ಹಂತಕರಿಗೆ ಯಾರ ಭಯವೂ ಇಲ್ಲದಂತಾಗಿದ್ದು, ಕೊಲೆ, ದಾಂಧಲೆ, ದರೋಡೆ, ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದರೂ, ಸಾಮಾಜಿಕ ಭದ್ರತೆ ಕಲ್ಪಿಸಿ ಜನರಿಗೆ ಅಭಯ ತುಂಬಬೇಕಾದ ಗೃಹ ಇಲಾಖೆ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಡದೇ ನಾಗರಿಕ ಸಮಾಜದ ವಿಶ್ವಾಸ ಕಳೆದುಕೊಂಡಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. 

ಇದನ್ನೂ ಓದಿ: ಎನ್‌ಐಎ ಮಾಜಿ ಡಿಜಿ ದಿನಕರ್ ಗುಪ್ತಾ ಅವರಿಗೆ 'ಝಡ್-ಪ್ಲಸ್' ವರ್ಗದ ವಿಐಪಿ ಭದ್ರತೆ

ದುರ್ಬಲರು, ಅಬಲೆಯರು ಭರವಸೆ ಹೊತ್ತು ಧೈರ್ಯದಿಂದ ಪೊಲೀಸ್ ಠಾಣೆ ಮೆಟ್ಟಿಲೇರುವ ವಾತಾವರಣ ಕಲ್ಪಿಸಲಾಗದ ಕಾಂಗ್ರೆಸ್ ಸರ್ಕಾರದ ನಿಷ್ಕ್ರೀಯ ಆಡಳಿತದಿಂದ ದೇಶದಲ್ಲಿ ರಾಜ್ಯದ ಗೌರವ, ಘನತೆಗಳು ಕುಸಿದು ಬೀಳುತ್ತಿದೆ. ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರಲಾರದ ಸ್ಥಿತಿ ತಲುಪಿರುವ ಕಾಂಗ್ರೆಸ್ ಸರ್ಕಾರ ಅಸಮರ್ಥ ಗೃಹ ಸಚಿವರ ರಾಜೀನಾಮೆ ಪಡೆಯಲಿ, ಹಾಗೆಯೇ ಮುಖ್ಯಮಂತ್ರಿಗಳು ಸರಣೀ ಘಟನೆಗಳ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸುವೆ ಎಂದು ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News