ದಿಕ್ಕಿಲ್ಲದ ಹಡಗಿನಂತಾದ ಪ್ರಾಥಮಿಕ & ಪ್ರೌಢ ಶಿಕ್ಷಣ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. 

Written by - Puttaraj K Alur | Last Updated : May 18, 2024, 11:50 PM IST
  • ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ
  • ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ
  • ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ
ದಿಕ್ಕಿಲ್ಲದ ಹಡಗಿನಂತಾದ ಪ್ರಾಥಮಿಕ & ಪ್ರೌಢ ಶಿಕ್ಷಣ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ title=
ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಅವರು, ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ ನಾಳಿನ ಪ್ರಜೆಗಳ ಭವ್ಯ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: "ಇಂಡಿ ಸುಳ್ಳು ಹೇಳುವ ಮತ್ತು ಲೂಟಿ ಮಾಡುವ ಮೈತ್ರಿಕೂಟ"-ಪ್ರಹ್ಲಾದ್ ಜೋಶಿ 

ಕಾಂಗ್ರೆಸ್ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರವೃತ್ತಿ ಮೇಳೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣ ಅರಾಜಕತೆಯತ್ತ ಸಾಗಿದೆ, ಇದನ್ನು ಮುಖ್ಯಮಂತ್ರಿಗಳು ಇಂದು ಒಪ್ಪಿಕೊಂಡು ಕೃಪಾಂಕ ನೀಡುವಷ್ಟು ತಳಮಟ್ಟಕ್ಕೆ ಕುಸಿದಿರುವ SSLC ಪರೀಕ್ಷೆಯ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿ ಇಲಾಖೆಯ ದುಸ್ಥಿತಿಯ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ. ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. 

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಿಗೆ ಸರಿಸುವ ವಿದ್ವತ್ತು ಪ್ರದರ್ಶಿಸಲು ಹೋಗಿ ನೈಜ ಶಿಕ್ಷಣ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ಸರ್ಕಾರ 'ಚಾಲನೆಯ ಅನುಭವವಿಲ್ಲದ ಚಾಲಕನೊಬ್ಬ ವಾಹನ ಅಥವಾ ರೈಲು ಮುನ್ನಡೆಸಿದರೆ ಯಾವ ಸ್ಥಿತಿ ಉಂಟಾಗಬಹುದು'. ಅಂತದ್ದೇ ಸ್ಥಿತಿ ಇಂದು ರಾಜ್ಯದ ಪ್ರಾಥಮಿಕ ಹಾಗೂ ಶಿಕ್ಷಣ ಇಲಾಖೆಗೆ ಒದಗಿ ಬಂದಿದೆ. 'ಮೇಟಿ ವಿದ್ಯೆಗೆ ರೈತ, ಅಕ್ಷರ ವಿದ್ಯೆಗೆ ವಿನಯವಂತನಿದ್ದರೆ ಕೃಷಿ-ಶಿಕ್ಷಣ ಎರಡೂ ಸಮೃದ್ಧವಾಗುತ್ತದೆ' ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ: Daily GK Quiz: ಯಾವ ನಗರವನ್ನು ಮುತ್ತಿನ ನಗರಿ ಎಂದು ಕರೆಯಲಾಗುತ್ತದೆ?

ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ವಿವೇಕ ಬಳಸದೆ ವಿದ್ಯಾ ಇಲಾಖೆಯನ್ನು ವಿಧೇಯತೆ ಗೊತ್ತಿಲ್ಲದವರ ಕೈಗೆ ಒಪ್ಪಿಸಿದ್ದ ಕಾರಣಕ್ಕಾಗಿ ಇಂದು ಅವರೇ ಪಶ್ಚಾತಾಪ ಪಡುವಂತಹ ಪರಿಸ್ಥಿತಿ ಉದ್ಭವಿಸಿದೆ. ಈಗಲಾದರೂ ಈ ನಾಡನ್ನು ಹಾಗೂ ದೇಶವನ್ನು ಭವಿಷ್ಯತ್ತಿನಲ್ಲಿ ಕಟ್ಟುವ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಲ್ಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯನ್ನು ಸರಿ ದಾರಿಗೆ ತರುವ ಕಟ್ಟುನಿಟ್ಟಿನ ಕ್ರಮ ವಹಿಸಲಿ. ಶಿಕ್ಷಣ ಬದ್ಧತೆ ಇದ್ದವರ ಕೈಗೆ ಇಲಾಖೆಯ ಸಾರಥ್ಯ ವಹಿಸಿಕೊಡಲಿ ಎಂದು ಒತ್ತಾಯಿಸುವೆ ಎಂದು ವಿಜಯೇಂದ್ರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News