ಬೆಂಗಳೂರು : ವಿಧಾನ ಪರಿಷತ್  ವಿಪಕ್ಷ ನಾಯಕ ಸ್ಥಾನ ನೀಡದ ಕಾರಣದಿಂದ ಬೇಸತ್ತಿರುವ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ (C M Ibrahim resignation). 


COMMERCIAL BREAK
SCROLL TO CONTINUE READING

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ರಾಜೀನಾಮೆ ಪತ್ರ (resignation  letter) ರವಾನಿಸಿದ್ದಾರೆ. ಈ ಬಗ್ಗೆ  ಸುದ್ದಿಗೋಷ್ಠಿ ನಡೆಸಿದ ಸಿ ಎಂ ಇಬ್ರಾಹಿಂ (C M Ibrahim), ತಮಗೆ ಕಾಂಗ್ರೆಸ್ (Congress) ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರಕದ ಹಿನ್ನಲೆಯಲ್ಲಿ ಪಕ್ಷ ಬಿಡುತ್ತಿದ್ದೇನೆ ಎಂದು ಹೇಳಿದ್ದಾರೆ. ಜೆಡಿಎಸ್ ವರಿಷ್ಟ ಮಾಜಿ ಪ್ರಧಾನಿ ದೇವೇಗೌಡರ (HD Devegowda)ಜತೆ ಮಾತುಕತೆ ನಡೆಯುತ್ತಿದೆ, ಜೆಡಿಎಸ್ ಪಕ್ಷ ಸೇರ್ಪಡೆ ಬಗ್ಗೆ ದಿನಾಂಕ  ತಿಳಿಸುವುದಾಗಿಯೂ ಹೇಳಿದ್ದಾರೆ. 


ಇದನ್ನೂ ಓದಿ : Mysuru: ವಕೀಲೆ ಅನುಮಾನಾಸ್ಪದ ಸಾವು; ಪೋಷಕರಿಂದ ಗಂಭೀರ ಆರೋಪ


ನಾನು ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ (C M Ibrahim resignation). ಎಂಎಲ್ ಸಿ ಸ್ಥಾನಕ್ಕೂ ರಾಜೀನಾಮೆ ನೀಡುತೇನೆ. ಅಂಗೀಕಾರ ಮಾಡುವುದು, ಬಿಡುವುದು ಅವರಿಗೆ ಸೇರಿದ್ದು ಎಂದು ಇಬ್ರಾಹಿಂ ಹೇಳಿದ್ದಾರೆ. ನನ್ನ ರಾಜೀನಾಮೆ ಪತ್ರವನ್ನು  ಸಿದ್ದರಾಮಯ್ಯ ಗೆ ಕೊಡುತ್ತಿದ್ದೇನೆ ಎಂದವರು ತಿಳಿಸಿದ್ದಾರೆ.


[[{"fid":"232379","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಅನೇಕರು ನನ್ನ ಜೊತೆ ಬರುತ್ತಿದ್ದಾರೆ. ೨೦ ರ ನಂತರ ದೊಡ್ಡ ಪರ್ವ ಶುರುವಾಗಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರಿಂದ ನಾನು ಕಾಂಗ್ರೆಸ್ ಸೇರಿದೆ. ಆದರೆ ಅವರು ನನ್ನನ್ನು ನಡು ನೀರಲ್ಲಿ ಕೈ ಬಿಟ್ಬಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ : Dharwad Crime: ಕುಡಿದು ಬಂದು ಎಗರಾಡಿದ್ದ ಗಂಡನ ಹತ್ಯೆ..!


ಇದೇ ವೇಳೆ ರಾಹುಲ್ ಗಾಂಧಿ (Rahul Gandhi), ಸೋನಿಯಾ, ಡಿಕೆಶಿ, ಸಿದ್ದುಗೆ ಧನ್ಯವಾದ ಸಲ್ಲಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.