ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಾಳೆ ಸಿಎಂ ಇಬ್ರಾಹಿಂ ಪದಗ್ರಹಣ
ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹಾಗೂ ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರು ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.
ಬೆಂಗಳೂರು: ಏಪ್ರಿಲ್ 17ರಂದು ಬೆಳಗ್ಗೆ ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹಾಗೂ ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರು ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಇದನ್ನು ಓದಿ: HD Kumaraswamy : ಈಶ್ವರಪ್ಪ ಪರ ಹೆಚ್‌ಡಿಕೆ ಬ್ಯಾಟಿಂಗ್!
ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಪ್ಪೇಸ್ವಾಮಿ ಅವರು ಮಾಹಿತಿ ನೀಡಿದರು.
ರಾಜಕೀಯ ಭವಿಷ್ಯ ನುಡಿದಿದ್ದ ಇಬ್ರಾಹಿಂ: ಯುಗಾದಿ ವರ್ಷ ಹೊಸತೊಡಕಿನ ಬಳಿಕ ದೊಡ್ಡ ಮಟ್ಟದ ರಾಜಕೀಯ ಪ್ರವಾಹ ಬರುತ್ತದೆ. ಗುರುವಾರದ ದಿವಸ ಎಲ್ಲಾ ಧರ್ಮಗಳಿಗೆ ಶ್ರೇಷ್ಠವಾದದ್ದು. ಆ ಕಾರಣಕ್ಕಾಗಿ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಮುಂದಿನ ನಡೆ ಇಲ್ಲಿಂದ ಆರಂಭ ಎಂದು ಈ ಹಿಂದೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿ.ಎಂ ಇಬ್ರಾಹಿಂ ಹೇಳಿಕೆ ನೀಡಿದ್ದರು.
ಇದನ್ನು ಓದಿ: "40% ಕಮೀಷನ್ ವಿಚಾರ ನಮಗ್ಯಾಕೆ ?"
ನನ್ನ ಮೇಲೆ ಏನು ಹೊರೆ ಇತ್ತು ಅದನ್ನು ಕಳಚಿಕೊಂಡಿದ್ದೇನೆ. ನನ್ನ ಮುಂದಿನ ನಡೆಯನ್ನು ಹೆಚ್.ಡಿ. ದೇವೇಗೌಡರ (HD Devegowda) ಪಾಲಿಗೆ ಬಿಟ್ಟಿದ್ದೇನೆ. ಅವರು ಮಾರ್ಗದರ್ಶಕರು. ದೇಶಕ್ಕೆ ಮಾರ್ಗದರ್ಶನ ಕೊಟ್ಟವರು, ಅಜಾತ ಶತ್ರು" ಎಂದು ಹೇಳಿದ್ದರು. ಇದೀಗ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ನಾಳೆ ಪದಗ್ರಹಣ ಸ್ವೀಕರಿಸಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.