ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ. ಸಿಎಎ ಜಾರಿ ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು.
CM Siddaramaiah: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಇದನ್ನೂ ಓದಿ- ಪ್ರತಾಪ್ ಸಿಂಹಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪುವ ಸಾಧ್ಯತೆ
ಪಕ್ಷಕ್ಕೆ ಬಲ:
ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ- Lok Sabha Election 2024: ಚುನಾವಣೆಗೂ ಮುನ್ನ ಆನ್‌ಲೈನ್‌ನಲ್ಲಿ ವೋಟರ್ ಐಡಿ ವಿಳಾಸವನ್ನು ಸುಲಭವಾಗಿ ಅಪ್ಡೇಟ್ ಮಾಡಿ
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಿಕೆಟ್ ಮಿಸ್!
ಇದೇ ಸಂದರ್ಭದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ಬಿಜೆಪಿ ನಿರ್ಧಾರ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.