ಯಾವಾಗಲಾದರೂ ಸಚಿವ ಸಂಪುಟ ವಿಸ್ತರಣೆ ಆಗಬಹುದು: ಡಿಸಿಎಂ ಪರಮೇಶ್ವರ್

ಜೂನ್ 28, 29 ರ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ವಾಪಸ್ ಆಗಲಿದ್ದಾರೆ. ಆ ನಂತರ ಸಮನ್ವಯ ಸಮಿತಿ ಸಭೆ ಕರೆದು, ಸಭೆಯಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇವೆ. 

Last Updated : Jun 25, 2018, 03:12 PM IST
ಯಾವಾಗಲಾದರೂ ಸಚಿವ ಸಂಪುಟ ವಿಸ್ತರಣೆ ಆಗಬಹುದು: ಡಿಸಿಎಂ ಪರಮೇಶ್ವರ್ title=
File Photo

ಯಾವಾಗ ಬೇಕಾದ್ರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಲು ನಾನು ಧರ್ಮಸ್ಥಳಕ್ಕೆ ಹೋಗಿದ್ದೆ. ಆ ಸಮಯದಲ್ಲಿ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕದ ಬಗ್ಗೆಯೂ ಚರ್ಚಿಸಿದ್ದೇವೆ. ಜೂನ್ 28, 29 ರ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ವಾಪಸ್ ಆಗಲಿದ್ದಾರೆ. ಆ ನಂತರ ಸಮನ್ವಯ ಸಮಿತಿ ಸಭೆ ಕರೆದು, ಸಭೆಯಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇವೆ. ಸಭೆಯಲ್ಲಿ ಜೊತೆಗೆ ಯಾರಿಗಾದರೂ ಅಸಮಧಾನವಿದ್ದರೂ ಸಹ ನಾವು ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಪರಂ ಹೇಳಿದರು.  

ಭಾನುವಾರ ಮಧ್ಯಾಹ್ನ ಧರ್ಮಸ್ಥಳದ ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಿ ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪರಮೇಶ್ವರ್‌, ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿಗೆ ಒಪ್ಪಿಗೆ ಪಡೆಯುವ ಸಂಬಂಧ ಮಾತುಕತೆ ನಡೆಸಿದರು. 

Trending News