Cabinet Meeting : ಸಚಿವ ಸಂಪುಟ ಸಭೆ : ಮಾರ್ಚ್ 4ಕ್ಕೆ ಬಜೆಟ್ ಮಂಡನೆ ಫಿಕ್ಸ್?!
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ತಮ್ಮ ಚೊಚ್ಚಲ ಬಜೆಟ್ ಮಂಡಿಸುವ ಸಿದ್ಧತೆಗಳನ್ನ ನಡೆಸಿದ್ದು, ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಪ್ರಾರಂಭ ಆಗಲಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು : ಜಂಟಿ ಅಧಿವೇಶನ ನಡೆಯುವ ಮದ್ಯೆ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಮಾರ್ಚ್ 4 ಅಥವಾ 7ಕ್ಕೆ ಬಜೆಟ್ ಅಧಿವೇಶನ ಪ್ರಾರಂಭಿಸಲು ಅನೌಪಚಾರಿಕ ಚರ್ಚೆ ನಡೆಸಲಾಯಿತು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ತಮ್ಮ ಚೊಚ್ಚಲ ಬಜೆಟ್ ಮಂಡಿಸುವ ಸಿದ್ಧತೆಗಳನ್ನ ನಡೆಸಿದ್ದು, ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಪ್ರಾರಂಭ ಆಗಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : "ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿರುವುದು ಅಸಹ್ಯ ರಾಜಕಾರಣದ ಪರಮಾವಧಿ"
ಸಂಪುಟ ಸಭೆ ಬಳಿಕ ಸಿಎಂ ಬೊಮ್ಮಾಯಿ ಬಜೆಟ್ ದಿನಾಂಕ ಘೋಷಣೆ ಮಾಡಲು ನಿರಾಕರಿಸಿದರು. ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಎಲ್ಲಾ ಇಲಾಖೆಗಳ ಬಜೆಟ್ ಮೀಟಿಂಗ್ ಕರೆದಿದ್ದೇನೆ. ಪ್ರಮುಖ ಸಂಘ ಸಂಸ್ಥೆಗಳ ಜೊತೆ ಚರ್ಚೆ ಮಾಡಬೇಕು. ಬಳಿಕ ದಿನಾಂಕ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
ಸಂಪುಟ ಸಭೆ(Cabinet Meeting)ಯಲ್ಲಿ ಕರ್ನಾಟಕ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ತಿದ್ದುಪಡಿ ನಿಯಮಗಳು, 2022ಕ್ಕೆ ಅನುಮೋದನೆ ನೀಡಲಾಗಿದೆ. ಇದರ ಮೂಲಕ ಕೆಪಿಎಸ್ ಸಿ ವ್ಯಕ್ತಿತ್ವ ಪರೀಕ್ಷೆ (ವೈವಾ)ದಲ್ಲಿನ ಈಗಿರುವ 50 ಅಂಕವನ್ನು 25ಕ್ಕೆ ಕಡಿತಗೊಳಿಸುವ ನಿಟ್ಟಿನಲ್ಲಿ ನಿಯಮಕ್ಕೆ ತಿದ್ದುಪಡಿ ತರಲಾಗುತ್ತದೆ.
ಪ್ರಮುಖ ಅನುಮೋದನೆಗಳು:
ನಂದಿ ಬೆಟ್ಟದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (DBFOT) ಆಧಾರದ ಮೇಲೆ 93.40 ಕೋಟಿ ರೂ.ಗಳ ಅಂದಾಜು ವೆಚ್ಚದ ಪ್ರಯಾಣಿಕರ ರೋಪ್ ವೇಗಳ ಅಭಿವೃದ್ಧಿ ಮತ್ತು ಕಾರ್ಯಾಚರಣೆಗಾಗಿ ಖಾಸಗಿ ಪಾಲುದಾರರ ಆಯ್ಕೆಗೆ ಟೆಂಡರ್ ಅನ್ನು ಆಹ್ವಾನಿಸಲು ಆಡಳಿತಾತ್ಮಕ ಅನುಮೋದನೆ.
ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ತೀರ್ಮಾನಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಮಟ್ಟದ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮೆಡಿಕಲ್ ಗ್ಯಾಸ್ ಪೈಪ್‌ಲೈನ್ ಅಳವಡಿಸುವ ಕಾಮಗಾರಿ ಹಾಗೂ ಸಂಬಂಧಿಸಿದ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳ 222.41 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ
ಇದನ್ನೂ ಓದಿ : 'ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ'
ಬೆಂಗಳೂರು ದಕ್ಷಿಣ ತಾಲೂಕು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರಿಂದ ಕಂಬಿಪುರ ಕಾರುಬೆಲೆ ಜಿಲ್ಲಾ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಯ ರೂ. 13.88 ಕೋಟಿಗಳ ಪರಿಷ್ಕೃತ ಅಂದಾಜು ಪಟ್ಟಿ (ಭೂಸ್ವಾಧೀನ ವೆಚ್ಚ ಸೇರಿ)ಗೆ ಅನುಮೋದನೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.