ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ
ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಲು ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಲು ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಈ ಕುರಿತಾಗಿ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ "ಕನ್ನಡ, ಕನ್ನಡಿಗರ ಅಭಿವೃದ್ಧಿಗೆ ಕ.ಸಾ.ಪ ನಿರಂತರ ಶ್ರಮವಹಿಸುತ್ತಿದೆ. ಕನ್ನಡಕ್ಕೆ ಕುತ್ತು ಬಂದಾಗ ಕನ್ನಡ ಸಾಹಿತ್ಯ ಪರಿಷತ್ ಯಾವಾಗಲೂ ಮುಂಚೂಣಿಯಲ್ಲಿದೆ.ಈಗ ರಾಜ್ಯ ಸರ್ಕಾರ ಕಸಾಪ ಅಧ್ಯಕ್ಷರಿಗೆ ಸಚಿವ ದರ್ಜೆಯ ಸ್ಥಾನಮಾನ ನೀಡಿರುವುದು ಕಸಾಪದ ಸದಸ್ಯರ ಘನತೆಯನ್ನು ಹೆಚ್ಚಿಸಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: Vikrant Rona : ಧರೆಗುರುಳಿದ ‘ವಿಕ್ರಾಂತ್ ರೋಣ’ ಕಟೌಟ್..!
ಇದನ್ನೂ ಓದಿ: ‘ಕಿಚ್ಚ’ನಿಗೆ ಥ್ಯಾಂಕ್ಸ್ ಹೇಳಿ ಗುಡ್ಡಿ ಫ್ರೆಂಡ್ ಭಾಸ್ಕರ್ ಬಗ್ಗೆ ರಾಜಮೌಳಿ ಟ್ವೀಟ್
ಇನ್ನೂ ಮುಂದುವರೆದು ಮಾತನಾಡಿದ ಅವರು "ಅಧ್ಯಕ್ಷನಾಗಿ ನಾನು ಇಡೀ ಕ.ಸಾ.ಪ ವನ್ನು, ಪ್ರತೀ ಕನ್ನಡಿಗನನ್ನು ಪ್ರತಿನಿಧಿಸುವವನು, ಕನ್ನಡ, ಕನ್ನಡಿಗರು, ನೆಲ, ಜಲ, ಭಾಷೆ ಬಗ್ಗೆ ಅಗಾಧ ಕೆಲಸ ಮಾಡುತ್ತೇವೆ.ಈಗ ಈ ಸ್ಥಾನಮಾನಕ್ಕಾಗಿ ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ 3,60,000 ಸದಸ್ಯರಿಂದಲೂ ಅಭಿನಂದನೆ ಸಲ್ಲಿಸುತ್ತೇನೆ' ಎಂದು ಅವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.